ಐಪಿಎಲ್ 2020: ಡೆಲ್ಲಿvs ಪಂಜಾಬ್: ಟೀಮ್ ಬಸ್‌ನಲ್ಲಿ ಕ್ರಿಸ್ ಗೇಲ್ ಮಸ್ತ್ ಡ್ಯಾನ್ಸ್!

ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ಸ್ಪೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ತಮ್ಮ ತಮಡದ ಮೊದಲ ಪಂದ್ಯದಲ್ಲಿ ಆಡುವ ಅವಕಾಶದಿಂದ ವಂಚಿತರಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗೇಲ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿಲ್ಲ. ಆದರೂ 'ಯುನಿವರ್ಸಲ್ ಬಾಸ್' ಉತ್ತಮ ಜೋಶ್‌ನಲ್ಲಿದ್ದಾರೆ. ಮೈದಾನಕ್ಕೆ ಇಳಿಯದಿದ್ದರೂ ಅಭಿಮಾನಿಗಳನ್ನು ರಂಜಿಸಿದ್ದಾರೆ.

ಕ್ರಿಸ್ ಗೇಲ್ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಅಭಿಮಾನಿಗಳಿಗೆ ಮನರಂಜನೆಯನ್ನು ನೀಡುತ್ತಾರೆ. ಆದರೆ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆಯದ ಕ್ರಿಸ್ ಗೇಲ್ ಮನರಂಜಿಸುವಲ್ಲಿ ಹಿಂದೆ ಬಿದ್ದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನೃತ್ಯದ ಮಾಡುವ ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಜೋಶ್ ತುಂಬಿದ್ದಾರೆ.

ಚೆನ್ನೈ ವಿರುದ್ಧದ ಪಂದ್ಯಕ್ಕೆ ರಾಜಸ್ಥಾನದ ಸ್ಟಾರ್ ಕ್ರಿಕೆಟರ್ ಅಲಭ್ಯ!

ಟೀಮ್ ಬಸ್‌ನಲ್ಲಿ ಸಂಚರಿಸುವ ಸಂದರ್ಭದಲ್ಲಿ ಕ್ರಿಸ್ ಗೇಲ್ ಬೋಜ್‌ಪುರಿ ಭಾಷೆಯ ಜನಪ್ರಿಯ ಹಾಡೊಂದಕ್ಕೆ ಕುಳಿತಲ್ಲೇ ನೃತ್ಯ ಮಾಡಿ ಆನಂದಿಸಿದ್ದಾರೆ. ಈ ವಿಡಿಯೋವನ್ನು ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು ಅಭಿಮಾನಿಗಳು ಸಾಕಷ್ಟು ಉತ್ತಮ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ಆರಂಭಿಕ ಪಂದ್ಯದಲ್ಲಿ ಕ್ರಿಸ್ ಗೇಲ್ ಆಡದಿರುವುದು ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ. ಆದರೂ ಮುಂದಿನ ಪಂದ್ಯಗಳಲ್ಲಿ ಕ್ರಿಸ್ ಗೇಲ್ ಅವರನ್ನು ಮತ್ತೊಮ್ಮೆ ಕಾಣುವ ನಿರೀಕ್ಷೆಯಲ್ಲಿದ್ದಾರೆ ಕ್ರಿಸ್ ಗೇಲ್ ಅಭಿಮಾನಿಗಳು.

ಗೆಲುವಿನ ಸಂತಸದ ಜೊತೆಗೆ ಕಹಿ ಸುದ್ದಿ ಕೊಟ್ಟ ಚೆನ್ನೈ ಕೋಚ್!

ಕಿಂಗ್ಸ್ ಇಲವೆನ್ ಪಂಜಾಬ್ ತಂಡ ತನ್ನ ಎರಡನೇ ಪಂದ್ಯವನ್ನು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡದ ವಿರುದ್ಧ ಆಡಲಿದೆ. ಸೆಪ್ಟೆಂಬರ್ 24 ರಮದು ನಡೆಯುವ ಈ ಪಂದ್ಯದಲ್ಲಿ ಗೇಲ್ ಆಡುತ್ತಾರೋ ಇಲ್ಲವೋ ಎಂಬುದು ಮುಂದೆ ತಿಳಿಯಲಿದೆ.

For Quick Alerts
ALLOW NOTIFICATIONS
For Daily Alerts

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Sunday, September 20, 2020, 21:43 [IST]
Other articles published on Sep 20, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X