ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ 46ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಟಾಸ್ ಗೆದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿದೆ.
ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯವು ಬಹಳ ಕುತೂಹಲ ಘಟ್ಟವಾಗಿದ್ದು, ಉಭಯ ತಂಡಗಳು ಪ್ಲೇ ಆಫ್ ಹಂತಕ್ಕೇರಲು ಈ ಪಂದ್ಯದ ಫಲಿತಾಂಶವು ಅತ್ಯಂತ ಮುಖ್ಯವಾಗಿದೆ.
ಕೆ.ಎಲ್ ರಾಹುಲ್ ನಾಯಕನಾಗಿ ಬೆಳೆಯುತ್ತಿದ್ದಾನೆ, ಅನಿಲ್ ಕುಂಬ್ಳೆ ಪಾತ್ರ ಮರೆಯದಿರಿ!
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಆಟಗಾರನ ಬದಲಾವಣೆ ಮಾಡದೆ ಕಳೆದ ಸನ್ರೈಸರ್ಸ್ ಹೈದ್ರಾಬಾದ್ ವಿರುದ್ಧ ಆಡಿದ ತಂಡವೇ ಮುಂದುವರಿಯಲಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿಯೂ ಯಾವುದೇ ಬದಲಾವಣೆ ಆಗಿಲ್ಲ.
ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ 11
ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (W), ಇಯೊನ್ ಮಾರ್ಗಾನ್ (C), ಸುನಿಲ್ ನರೇನ್, ಪ್ಯಾಟ್ ಕಮಿನ್ಸ್, ಲ್ಯುಕಿ ಫರ್ಗ್ಯುಸನ್, ಪ್ರಸಿದ್ ಕೃಷ್ಣ, ವರುಣ್ ಚಕ್ರವರ್ತಿ, ಕಮಲೇಶ್ ನಾಗರಕೋಟಿ
ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇಯಿಂಗ್ 11:
ಕೆ.ಎಲ್ ರಾಹುಲ್, ಮಂದೀಪ್ ಸಿಂಗ್, ಕ್ರಿಸ್ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ವೆಲ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ, ರವಿ ಬಿಷ್ನೋಯಿ, ಅರ್ಷ್ದೀಪ್ ಸಿಂಗ್