Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಬೃಹತ್ ಮೊತ್ತದ ಕಾದಾಟಕ್ಕೆ ರಾಜಸ್ಥಾನ್ ಹಾಗೂ ಪಂಜಾಬ್ ಸಜ್ಜು: ಸಂಭಾವ್ಯ ತಂಡ

Ipl 2020: Kxip Vs Rr, Match 9 Predicted Playing 11

ಐಪಿಎಲ್ 2020ಯ 9ನೇ ಪಂದ್ಯ ಇಂದು ಶಾರ್ಜಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು ರಾಜಸ್ಥಾನ್ ರಾಯಲ್ಸ್ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ತಂಡಗಳು ಸಜ್ಜಾಗಿದೆ. ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ಲೈನ್‌ಅಪ್‌ಗೆ ಜೋಸ್ ಬಟ್ಲರ್ ಸೇರ್ಪಡೆಗೊಂಡಿರುವುದು ತಂಡದ ಬಲ ಹೆಚ್ಚಿಸಿದೆ. ಹೀಗಾಗಿ ಎರಡು ತಂಡಗಳ ಮಧ್ಯೆ ಹೈ ಸ್ಕೋರಿಂಗ್ ಪಂದ್ಯ ನಡೆಯುವ ನಿರೀಕ್ಷೆಯಿದೆ.

ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದನವನ್ನು ಭರ್ಜರಿಯಾಗಿ ಮಣಿಸಿ ಟೂರ್ನಿಯ ಶುಭಾರಂಭವನ್ನು ಮಾಡಿದೆ. ಮತ್ತೊಂದೆಡೆ ಕಿಂಜ್ಸ್ ಇಲವೆನ್ ಪಂಜಾಬ್ ತಂಡ ಮೊದಲ ಪಂದ್ಯದಲ್ಲಿ ಸೂಪರ್ ಓವರ್‌ ಸೋಲಿನ ಬಳಿಕ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದು ಆರ್‌ಸಿಬಿ ವಿರುದ್ಧ 97 ರನ್‌ಗಳ ಭರ್ಜರಿ ಗೆಲುವನ್ನು ಸಾಧಿಸಿ ಉತ್ಸಾಹದಲ್ಲಿದೆ.

ಇಂದಿನ ಪಂದ್ಯದಲ್ಲಿ ಎರಡೂ ತಂಡಗಳಲ್ಲಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಸಂಜು ಸ್ಯಾಮ್ಸನ್ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಆಟದ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆಯಿಟ್ಟಿದ್ದಾರೆ. ಸಿಎಸ್‌ಕೆ ವಿರುದ್ಧ ಸಂಜು ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರೆ ಕೆಎಲ್ ರಾಹುಲ್ ಆರ್‌ಸಿಬಿ ವಿರುದ್ಧ ಮಿಂಚಿನ ಶತಕ ಸಿಡಿಸಿದ್ದರು.

ಸಂಭಾವ್ಯ ತಂಡಗಳು:
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೇವಟಿಯಾ, ಟಾಮ್ ಕರ್ರನ್, ಶ್ರೇಯಸ್ ಗೋಪಾಲ್, ಜೋಫ್ರಾ ಆರ್ಚರ್, ಜಯದೇವ್ ಉನಾದ್ಕಟ್

ಕೆ.ಎಲ್. ರಾಹುಲ್ (ನಾಯಕ/ವಿಕೆಟ್ ಕೀಪರ್), ಕ್ರಿಸ್ ಗೇಲ್ / ನಿಕೋಲಸ್ ಪೂರನ್, ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ಗ್ಲೆನ್ ಮ್ಯಾಕ್ಸ್ ವೆಲ್, ಸರ್ಫರಾಜ್ ಖಾನ್, ಜಿಮ್ಮಿ ನೀಶಮ್, ಶೆಲ್ಡನ್ ಕಾಟ್ರೆಲ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಮುರುಗನ್ ಅಶ್ವಿನ್.

Story first published: Sunday, September 27, 2020, 11:22 [IST]
Other articles published on Sep 27, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+