ಐಪಿಎಲ್ 2020: ಪಂಜಾಬ್ vs ಹೈದರಾಬಾದ್, ಟಾಸ್ ವರದಿ ಹಾಗೂ ಪ್ಲೇಯಿಂಗ್ 11

ಐಪಿಎಲ್ 2020 ಆವೃತ್ತಿಯ 43ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಇಂದಿನ ಪಂದ್ಯ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಎರಡೂ ತಂಡಗಳಿಗೂ ಮುಖ್ಯವಾಗಿದೆ. ಮುಂದಿನ ಹಂತಕ್ಕೇರಬೇಕಾದರೆ ಈ ಪಂದ್ಯವನ್ನು ಗೆಲ್ಲುವುದು ಮಾತ್ರವಲ್ಲ ಎರಡು ತಂಡಗಳು ಕೂಡ ರನ್‌ರೇಟ್‌ನತ್ತಲೂ ಗಮನ ನೀಡಬೇಕಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಇಂದಿನ ಪಂದ್ಯಕ್ಕಾಗಿ ಎರಡು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಆರಂಭಿಕನಾಗಿ ಮಿಂಚುತ್ತಿದ್ದ ಮಯಾಂಕ್ ಅಗರ್ವಾಲ್ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಜೊತೆಗೆ ಜಿಮ್ಮಿ ನೀಶಮ್ ಕೂಡ ತಂಡದಿಂದ ಹೊರಗುಳಿದಿದ್ದಾರೆ. ಇವರಿಬ್ಬರ ಸ್ಥಾನಕ್ಕೆ ಮಂದೀಪ್ ಸಿಂಗ್ ಹಾಗೂ ಕ್ರಿಸ್ ಜೋರ್ಡನ್ ಸೇರಿಕೊಂಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದ್ದು ಖಲೀಲ್ ಅಹ್ಮದ್ ಬದಲಿಗೆ ನದೀಮ್ ಕಣಕ್ಕಿಳಿದಿದ್ದಾರೆ.
ಕಿಂಗ್ಸ್ ಇಲೆವೆನ್ ಪಂಜಾಬ್ ಆಡುವ ಬಳಗ: ಕೆ.ಎಲ್. ರಾಹುಲ್ (ನಾಯಕ /ವಿಕೆಟ್ ಕೀಪರ್), ಕ್ರಿಸ್ ಗೇಲ್, ಮಂದೀಪ್ ಸಿಂಗ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಮುರುಗನ್ ಅಶ್ವಿನ್, ಕ್ರಿಸ್ ಜೋರ್ಡಾನ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷ್‌ದೀಪ್ ಸಿಂಗ್
ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ : ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ವಿಜಯ್ ಶಂಕರ್, ಪ್ರಿಯಮ್ ಗಾರ್ಗ್, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಟಿ ನಟರಾಜನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications