
ಐಪಿಎಲ್‌ನಲ್ಲಿ ಇಂದು 22ನೇ ಪಂದ್ಯ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆಯುತ್ತಿದೆ. ಟಾಸ್ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಂಕಪಟ್ಟಿಯಲ್ಲಿ ಭಾರೀ ಹಿನ್ನೆಡೆಯಲ್ಲಿರುವ ಎರಡೂ ತಂಡಗಳಿಗೂ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗಕ್ಕೆ ದೊಡ್ಡದೊಂದು ಸವಾಲುಂಟಾಗಿದೆ. ವೇಗಿ ಭುವನೇಶ್ವರ್ ಕುಮಾರ್ ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದು ಟೂರ್ನಿಯಿಂದಲೇ ಔಟ್ ಆಗಿದ್ದಾರೆ. ಹೀಗಾಗಿ ಭುವನೇಶ್ವರ್ ಅಲಭ್ಯತೆ ಟೂರ್ನಿಯುದ್ದಕ್ಕೂ ತಂಡಕ್ಕೆ ಕಾಡಲಿದೆ.
ಸನ್‌ರೈಸರ್ಸ್ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಕಳೆದ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಸಿದ್ಧಾರ್ಥ್ ಕೌಲ್ ಆಡುವ ಬಳಗದಿಂದ ಹೊರಬಿದ್ದಿದ್ದು ಖಲೀಲ್ ಅಹ್ಮದ್ ತಂಡಕ್ಕೆ ಮತ್ತೆ ಸೇರಿಕೊಂಡಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಮೂರು ಬದಲಾವಣೆಯಾಗಿದೆ. ಸಿಮ್ರಾನ್ ಸಿಂಗ್, ಮುಜೀಬ್ ಉರ್ ರಹ್ಮಾನ್, ಹಾಗೂ ಅರ್ಹ್‌ದೀಪ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದು, ಜೋರ್ಡಾನ್, ಬ್ರಾರ್ ಹಾಗೂ ಸರ್ಪರಾಜ್ ಹೊರಗುಳಿದಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ (ಆಡುವ ಬಳಗ): ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಮ್ ಗಾರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ರಶೀದ್ ಖಾನ್, ಸಂದೀಪ್ ಶರ್ಮಾ, ಕೆ ಖಲೀಲ್ ಅಹ್ಮದ್, ಟಿ ನಟರಾಜನ್
ಕಿಂಗ್ಸ್ ಇಲೆವೆನ್ ಪಂಜಾಬ್(ಆಡುವ ಬಳಗ): ಕೆ.ಎಲ್.ರಾಹುಲ್ (ನಾಯಕ), ಮಯಾಂಕ್ ಅಗರ್ವಾಲ್, ಮಂದೀಪ್ ಸಿಂಗ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಸಿಮ್ರಾನ್ ಸಿಂಗ್, ಗ್ಲೆನ್ ಮ್ಯಾಕ್ಸ್ ವೆಲ್, ರವಿ ಬಿಷ್ಣೋಯ್, ಅರ್ಶ್‌ದೀಪ್ ಸಿಂಗ್, ಮುಜೀಬ್ ಉರ್ ರಹಮಾನ್, ಮೊಹಮ್ಮದ್ ಶಮಿ, ಶೆಲ್ಡನ್ ಕಾಟ್ರೆಲ್