ಐಪಿಎಲ್ 2020: ಮುಂಬೈ vs ಕೊಲ್ಕತಾ, ಸಂಭಾವ್ಯ ತಂಡ ಹಾಗೂ ಇತರೆ ಮಾಹಿತಿ

ಐಪಿಎಲ್‌ನಲ್ಲ ಇಂದು ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತಾ ನೈಟ್ ರೈಡರ್ಸ್ ತಂಡಗಳು ಮೂಖಾಮುಖಿಯಾಗುತ್ತಿದೆ. ಈ ಹಣಾಹಣಿಯಲ್ಲಿ ಯಾರ ಕೈ ಮೇಲಾಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಟೂರ್ನಿಯಲ್ಲಿ ಮುಂಬೈ ಉತ್ತಮ ಪ್ರದರ್ಶನ ನೀಡಿಕೊಂಡು ಬರುತ್ತಿದ್ದು ಗೆಲ್ಲುವ ಫೇವರೀಟ್ ತಂಡ ಎನಿಸಿದೆ.
ಮುಂಬೈ ಇಂಡಿಯನ್ಸ್ ತಮ್ಮ ಮೊದಲಾರ್ಧದ 7 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿದೆ. ಮತ್ತೊಂದೆಡೆ ಕೊಲ್ಕತಾ ತಂಡ ಆಡಿರುವ 7 ಪಂದ್ಯಗಳಲ್ಲಿ 4ರಲ್ಲಿ ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಕಾದಾಟವನ್ನು ನಿರೀಕ್ಷಿಸಲಾಗುತ್ತಿದೆ. ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದ ಸಂದರ್ಭದಲ್ಲಿ ಮುಂಬೈ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಕೆಕೆಆರ್‌ಗೆ ಇದು ಉತ್ತಮ ಸಂದರ್ಭವಾಗಿದೆ.

ಟಾಸ್ ಹಾಗೂ ಹವಾಮಾನ
ಇಂದಿನ ಪಂದ್ಯವೂ ಎಂದಿನಂತೆಯೇ ಸಂಜೆ 7:30ಕ್ಕೆ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಅಬುದಾಭಿಯ ಶೇಖ್‌ಝಾಯೇದ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸಂದರ್ಭದಲ್ಲಿ 30ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣತೆಯಿರಲಿದೆ.

ಪಿಚ್ ರಿಪೋರ್ಟ್
ಐಪಿಎಲ್‌ನ ದ್ವಿತೀಯಾರ್ಧದಲ್ಲಿ ಪಿಚ್ ನಿಧಾನಗತಿಯಲ್ಲಿ ವರ್ತಿಸುತ್ತಿರುವುದು ಪ್ರೇಕ್ಷಕರ ಗಮನಕ್ಕೂ ಬಂದಿದೆ. ಹೀಗಾಗಿ 180 ರನ್ ಇಂದಿನ ಪಂದ್ಯದಲ್ಲಿ ದೊಡ್ಡ ಮೊತ್ತವಾಗಿರಲಿದೆ. 160ರ ಆಸುವಾಸಿನಲ್ಲಿ ರನ್ ಗಳಿಸಿದರೂ ಅದನ್ನು ರಕ್ಷಿಸಿಕೊಳ್ಳುವುದು ಸಾಧ್ಯವಾಗಲಿದೆ.

ಸಂಭಾವ್ಯ ತಂಡ ಮುಂಬೈ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ಟ್ರೆಂಟ್ ಬೌಲ್ಟ್, ರಾಹುಲ್ ಚಾಹರ್, ಜಸ್ಪ್ರೀತ್ ಬುಮ್ರಾ

ಸಂಭಾವ್ಯ ತಂಡ ಕೋಲ್ಕತಾ
ಕೆಕೆಆರ್ ಸಂಭಾವ್ಯ ತಂಡ: ಟಾಮ್ ಬ್ಯಾಂಟನ್, ಶುಭ್ಮನ್ ಗಿಲ್, ನಿತೀಶ್ ರಾಣಾ, ಇಯಾನ್ ಮಾರ್ಗಾನ್, ದಿನೇಶ್ ಕಾರ್ತಿಕ್, ಆಂಡ್ರೆ ರಸ್ಸೆಲ್, ರಾಹುಲ್ ತ್ರಿಪಾಠಿ, ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರ್ಕೋಟಿ, ವರುಣ್ ಚಕ್ರವರ್ತಿ, ಪ್ರಸಿದ್ ಕೃಷ್ಣ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications