For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಬೆಂಗಳೂರು vs ರಾಜಸ್ಥಾನ್, ಹೆಡ್ ಟು ಹೆಡ್ ಅಂಕಿಅಂಶ

IPL 2020, Match 33, RR vs RCB: Head-to-head records and Players to watch out for

ಐಪಿಎಲ್‌ನ 33ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಶನಿವಾರದ ಮೊದಲ ಪಂದ್ಯದಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಐಪಿಎಲ್‌ ಇತಿಹಾಸದಲ್ಲಿ ಈವರೆಗೆ 21 ಬಾರಿ ಈ ತಂಡಗಳು ಮುಖಾಮುಖಿಯಾಗಿದೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಆರ್‌ಸಿಬಿ 9 ಪಂದ್ಯಗಳಲ್ಲಿ ಗೆದ್ದುಕೊಂಡಿದೆ. 2 ಪಂದ್ಯಗಳು ಮಳೆಯಿಂದಾಗಿ ರದ್ದಾಗಿದೆ.

ಈ ಬಾರಿಯ ಟೂರ್ನಿಯ ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಿದ್ದ ವೇಳೆ ರಾಯಲ್ ಚಾಲೆಂಜರ್ಸ್ ರಾಜಸ್ಥಾನ್ ರಾಯಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಮಣಿಸುಲ್ಲಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 154/6 ರನ್ ಗಳಿಸಿದ್ದರೆ ಇದನ್ನು ಬೆನ್ನಟ್ಟಿದ ಆರ್‌ಸಿಬಿ ಇನ್ನೂ ಐದು ಎಸೆತಗಳು ಬಾಕಿಯಿರುವಂತೆಯೇ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 72 ರನ್ ಗಳಿಸಿದ್ದರೆ ಚಾಹಲ್ 3 ವಿಕೆಟ್ ಪಡೆದು ಮಿಂಚಿದ್ದರು.

ಅಂಕಪಟ್ಟಿಯಲ್ಲಿ ಆರ್‌ಸಿಬಿ ಮುಂದೆಯಿದ್ದು ಮೂರನೇ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್‌ಸಿಬಿ 5 ಗೆಲುವುಗಳ ಮೂಲಕ 10 ಅಂಕಗಳನ್ನು ಹೊಂದಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ 7ನೇ ಸ್ಥಾನವನ್ನು ಹೊಂದಿದೆ. ಆಡಿದ 8 ಪಂದ್ಯಗಳಲ್ಲಿ 5ರಲ್ಲಿ ಸೋತಿದ್ದು 3 ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿ 6 ಅಂಕ ಹೊಂದಿದೆ.

ಈ ಎರಡು ತಂಡಗಳ ಪೈಕಿ ಈ ಬಾರಿಯ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಮುಂದಿದ್ದಾರೆ. ಕೊಹ್ಲಿ 304 ರನ್ ಗಳಿಸಿದ್ದಾರೆ. 261 ರನ್ ಗಳಿಸಿರುವ ಪಡಿಕ್ಕಲ್ 2ನೇ ಸ್ಥಾನದಲ್ಲಿದ್ದಾರೆ. ಎಬಿ ಡಿವಿಲಿಯರ್ಸ್ 3(230 ರನ್), ಸಂಜು ಸ್ಯಾಮ್ಸನ್ 4(227 ರನ್) ಹಾಗೂ ರಾಹುಲ್ ತೆವಾಟಿಯಾ(203ರನ್) 5ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್‌ನಲ್ಲಿ ಜೋಫ್ರಾ ಆರ್ಚರ್ 12 ವಿಕೆಟ್ ಕಿತ್ತು ಮೊದಲ ಸ್ಥಾನದಲ್ಲಿದ್ದರೆ ಆರ್‌ಸಿಬಿಯ ಚಾಹಲ್ 11 ವಿಕೆಟ್ ಪಡೆದು 2ನೇ ಸ್ಥಾನದಲ್ಲಿದ್ದಾರೆ. 7 ವಿಕೆಟ್ ಗಳಿಸಿರುವ ಇಸುರು ಉದನ 3ನೇ ಸ್ಥಾನದಲ್ಲಿದ್ದಾರೆ.

Story first published: Saturday, October 17, 2020, 10:34 [IST]
Other articles published on Oct 17, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+