ಐಪಿಎಲ್: ಮುಂಬೈ vs ಬೆಂಗಳೂರು, ಸಂಭಾವ್ಯ ತಂಡ, ಪಿಚ್ ರಿಪೋರ್ಟ್

ಅಬುಧಾಬಿ: ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಬುಧವಾರ (ಅಕ್ಟೋಬರ್ 28) ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 48ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಪಂದ್ಯ 7.30 pmಗೆ ಆರಂಭವಾಗಲಿದ್ದು 7 pmಗೆ ಟಾಸ್ ನಡೆಯಿದೆ. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಉಳಿಸಿಕೊಳ್ಳಲು ಮುಂಬೈ ಸೆಣಸಾಡಲಿದೆ, ಅಗ್ರಸ್ಥಾನಕ್ಕೇರಲು ಕೊಹ್ಲಿ ಪಡೆ ಹೋರಾಡಲಿದೆ.
ಈವರೆಗೆ ಆಡಿರುವ 11 ಪಂದ್ಯಗಳಲ್ಲಿ 7 ಜಯ ದಾಖಲಿಸಿರುವ ಮುಂಬೈ ಇಂಡಿಯನ್ಸ್ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. 11ರಲ್ಲಿ 7 ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ದ್ವಿತೀಯ ಸ್ಥಾನದಲ್ಲಿದೆ. ನೆಟ್ ರನ್‌ರೇಟ್ ಆಧಾರದಲ್ಲಿ ಮುಂಬೈ ಅಗ್ರ ಸ್ಥಾನದಲ್ಲಿದೆ.
ಮುಂಬೈ ಇಂಡಿಯನ್ಸ್ ಎಂದಿನ ನಾಯಕ ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ಆಡೋದು ಅನುಮಾನ. ಗಾಯಕ್ಕೀಡಾಗಿರುವ ಶರ್ಮಾ ಇನ್ನೂ ಚೇತರಿಸಿಕೊಂಡಿಲ್ಲ.

ಹವಾಮಾನ ವರದಿ
ಮುಂಬೈ ಇಂಡಿಯನ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ನಡೆಯುವ ಬುಧವಾರ ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ 31ರಿಂದ 25 ಡಿಗ್ರೀ ಸೆಲ್ಶಿಯನ್ ತಾಪಮಾನ ಇರಲಿದೆ. ಉಳಿದ ದಿನಗಳಿಗೆ ಹೋಲಿಸಿದರೆ ಈ ದಿನ ಸಲ್ಪ ಕಡಿಮೆ ತಾಪಮಾನ ಎನ್ನಬಹುದು.

ಪಿಚ್ ರಿಪೋರ್ಟ್
ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಕಳೆದೆರಡೂ ಪಂದ್ಯಗಳ ವೇಳೆ ಒಳ್ಳೆಯ ರನ್‌ಗಳು ಬಂದಿದ್ದವು. ಇವತ್ತಿನ ಪಂದ್ಯದಲ್ಲೂ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಅನುಕೂಲ ಮಾಡಿಕೊಡುವ ನಿರೀಕ್ಷೆಯಿದೆ. ಬ್ಯಾಟ್ಸ್‌ಮನ್‌ಗಳ ಎಚ್ಚರಿಕೆಯ ಆಟ ತಂಡದ ಜಯವನ್ನು ಅವಲಂಬಿಸಿದೆ.

ಮುಂಬೈ ಸಂಭಾವ್ಯ ತಂಡ
ಕ್ವಿಂಟನ್ ಡಿ ಕಾಕ್ (ವಿಕೆ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ (ಸಿ), ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.

ಬೆಂಗಳೂರು ಸಂಭಾವ್ಯ ತಂಡ
ದೇವದತ್ ಪಡಿಕ್ಕಲ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ (ಸಿ), ಎಬಿ ಡಿವಿಲಿಯರ್ಸ್ (ವಿಕೆ), ಗುರ್ಕೀರತ್ ಸಿಂಗ್, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications