For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಪಂಜಾಬ್ vs ರಾಜಸ್ಥಾನ್, ಹೆಡ್‌ ಟು ಹೆಡ್ ಅಂಕಿಅಂಶಗಳು

IPL 2020, Match 50, RR vs KXIP: Head-to-head records and Players to watch out for

ಐಪಿಎಲ್ 2020 ಆವೃತ್ತಿಯಲ್ಲಿ ಇಂದು 50ನೇ ಕಾದಾಟ ನಡೆಯಲಿದೆ. ಇಂದಿನ ಈ ಹಣಾಹಣಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಮುಖಾಮುಖಿಯಾಗುತ್ತದೆ. ಪ್ಲೇ ಆಫ್ ಹಂತಕ್ಕೇರಲು ಎರಡು ತಂಡಗಳಿಗೂ ಈ ಪಂದ್ಯದ ಗೆಲುವು ಅನಿವಾರ್ಯವಾಗಿದೆ. ಟೂರ್ನಿಯ ದ್ವಿತಿಯಾರ್ಧದಲ್ಲಿ ಶ್ರೇಷ್ಟ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿರುವ ಪಂಜಾಬ್ ಇಂದಿನ ಪಂದ್ಯದಲ್ಲಿ ಗೆಲ್ಲುವ ಫೇವರೀಟ್ ತಂಡ ಎನಿಸಿಕೊಂಡಿದೆ.

ಐಪಿಎಲ್ ಇತಿಹಾಸದಲ್ಲಿ ಈ ಎರಡು ತಂಡಗಳು ಈವರೆಗೆ ಒಟ್ಟಾರೆಯಾಗಿ 20 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ರಾಜಸ್ಥಾನ್ 11 ಪಂದ್ಯಗಳಲ್ಲಿ ಗೆದ್ದಿದ್ದರೆ ಪಂಜಾಬ್ ತಂಡ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ಅಲ್ಪ ಮುನ್ನಡೆಯಲ್ಲಿದೆ.

ಇನ್ನು ಈ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ರೋಚಕ ಪಂದ್ಯದಲ್ಲಿ ಪಂಜಾಬ್‌ಗೆ ರಾಜಸ್ಥಾನ್ ಸೋಲಿನ ರುಚಿ ತೋರಿಸುವಲ್ಲಿ ಯಶಸ್ವಿಯಾಗಿತ್ತು. ಪಂಜಾಬ್ ತಂಡದ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್‌ಗಳಲ್ಲಿ 223 ರನ್‌ಗಳನ್ನು ಬಾರಿಸಿತ್ತು. ಈ ಇನ್ನಿಂಗ್ಸ್‌ನಲ್ಲಿ ಮಯಾಂಕ್ ಅಗರ್ವಾಲ್ ಭರ್ಜರಿ ಶತಕವನ್ನು ಬಾರಿಸಿದ್ದರು. ಈ ಮೊತ್ತವನ್ನು ಬೆನ್ನಟ್ಟುವಲ್ಲಿ ಯಾಜಸ್ಥಾನ್ ಯಶಸ್ವಿಯಾಗಿತ್ತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ದಾಖಲೆಯನ್ನು ರಾಜಸ್ಥಾನ್ ತನ್ನದಾಗಿಸಿಕೊಂಡಿತ್ತು. ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್ ಹಾಗೂ ರಾಹುಲ್ ತೆವಾಟಿಯಾ ಈ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿ ಗೆಲುವಿಗೆ ಕಾರಣರಾಗಿದ್ದರು.

ಅಂಕಪಟ್ಟಿಯಲ್ಲಿ ಈ ಎರಡು ತಂಡಗಳ ಪೈಕಿ ಕಿಂಗ್ಸ್ ಇಲೆವೆನ್ ಪಂಜಾಬ್ ಮುನ್ನಡೆಯಲ್ಲಿದೆ. ಮೊದಲಾರ್ಧದಲ್ಲಿ ಸೋಲಿನ ಮೇಲೆ ಸೋಲು ಕಂಡಿದ್ದ ರಾಹುಲ್ ಬಳಗ ದ್ವಿತೀಯಾರ್ಧದಲ್ಲಿ ಊಹಿಸಲಾರದ ರೀತಿಯಲ್ಲಿ ತಿರುಗಿ ಬಿದ್ದಿದೆ. ಸದ್ಯ ನಾಲ್ಕನೇ ಸ್ಥಾನದಲ್ಲಿದೆ. ಆದರೆ ರಾಜಸ್ಥಾನ್ ಏಳನೇ ಸ್ಥಾನವನ್ನು ಪಡೆದುಕೊಂಡಿದೆ.

ಎರಡು ತಂಡಗಳ ಆಟಗಾರರ ಪೈಕಿ ಬ್ಯಾಟಿಂಗ್‌ನಲ್ಲಿ ಒಂಜಾಬ್ ನಾಯಕ ಕೆಎಲ್ ರಾಹುಲ್ 595 ರನ್‌ಗಳನ್ನು ಬಾರಿಸಿ ಟೂರ್ನಿಯಲ್ಲೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನೆನಿಸಿದ್ದಾರೆ. ಮಯಾಂಕ್ ಅಗರ್ವಾಲ್ 398 ರನ್ ಗಳಿಸಿದ್ದಾರೆ. ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಪಂಜಾಬ್ ತಂಡದ ಮೊಹಮ್ಮದ್ ಶಮಿ 20 ವಿಕೆಟ್ ಪಡೆದು ಮುಂಚೂಣಿಯಲ್ಲಿದ್ದಾರೆ. ಜೋಫ್ರಾ ಆರ್ಚರ್ 17 ವಿಕೆಟ್ ಪಡೆದಿದ್ದಾರೆ.

Story first published: Friday, October 30, 2020, 14:45 [IST]
Other articles published on Oct 30, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+