Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಬೆಂಗಳೂರು vs ಹೈದರಾಬಾದ್, ಸಂಭಾವ್ಯ ತಂಡಗಳು, ಪಿಚ್ ರಿಪೋರ್ಟ್

IPL 2020: Match 52, RCB vs SRH Preview, Probable Playing 11, Pitch Report, Toss Timing and Weather Forecast

ಐಪಿಎಲ್ ಅಂಗಳದಲ್ಲಿಂದು ಎರಡು ಪಂದ್ಯಗಳು ನಡೆಯಲಿದೆ. ಇಂದಿನ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದೆ. ಎರಡು ತಂಡಗಳು ಕೂಡ ಪ್ಲೇಆಫ್ ಹಂತಕ್ಕೆ ತಲುಪಲು ಕಾತರಿಸುತ್ತಿರುವುದರಿಂದ ಇಂದಿನ ಪಂದ್ಯ ಸಾಕಷ್ಟು ನಿರ್ಣಾಯಕವಾಗಿದೆ.

ಆರ್‌ಸಿಬಿ ಅಂಕಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನದಲ್ಲಿದೆ. ಆದರೆ ಇನ್ನೂ ಪ್ಲೇ ಆಫ್‌ಗೆ ಟಿಕೆಟ್ ಪಕ್ಕಾ ಮಾಡಿಕೊಂಡಿಲ್ಲ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡ 7ನೇ ಸ್ಥಾನದಲ್ಲಿದೆ. ಆದರೆ ಇಂದಿನ ಪಂದ್ಯವನ್ನು ಗೆದ್ದರೆ ಅಂಕಪಟ್ಟಿಯಲ್ಲಿ ಗಣನೀಯ ಏರಿಕೆ ಕಂಡು ನಾಲ್ಕನೇ ಸ್ಥಾನವನ್ನು ಅಲಂಕರಿಸುವ ಅವಕಾಶವೂ ಇದೆ.

ಪಂದ್ಯದ ಮಾಹಿತಿ/ಹವಾಮಾನ ವರದಿ

ಪಂದ್ಯದ ಮಾಹಿತಿ/ಹವಾಮಾನ ವರದಿ

ಪಂದ್ಯ ಶಾರ್ಜಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದ್ದು 7 ಗಂಟೆಯ ವೇಳೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಟೂರ್ನಮೆಂಟ್ ಅಂತ್ಯವಾಗುತ್ತಿರುವ ಸಂದರ್ಭದಲ್ಲೇ ಉಷ್ಣಾಂಶವೂ ಕಡೆಯಾಗುತ್ತಿದೆ. ಇಂದಿನ ಪಂದ್ಯದಲ್ಲಿ 27-30 ಡಿಗ್ರಿ ಸೆಲ್ಸಿಯಸ್ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದೆ.

ಪಿಚ್ ರಿಪೋರ್ಟ್

ಪಿಚ್ ರಿಪೋರ್ಟ್

ಶಾರ್ಜಾ ಕ್ರೀಡಾಂಗಣ ಇತ್ತೀಚೆಗೆ ನಡೆದ ಕೆಲ ಪಂದ್ಯಗಳಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಪೈಪೋಟಿಗೆ ಸಾಕ್ಷಿಯಾಗುತ್ತಿದೆ. ಇಬ್ಬನಿಯೂ ಪಂದ್ಯದ ಫಲಿತಾಂಶವನ್ನು ತಲೆಕೆಳಗೆ ಮಾಡುವ ಸಾಧ್ಯತೆಯಿದೆ. ಟಾಸ್ ಫಲಿತಾಂಶದ ಮೇಲೆ ಹೆಚ್ಚಿನ ಪ್ರಭಾವ ಬೀರದಿದ್ದರೂ ಇತ್ತೀಚಿನ ಕೆಲ ಪಂದ್ಯಗಳಲ್ಲಿ ಟಾಸ್ ಗೆದ್ದ ತಂಡ ರನ್ ಬೆನ್ನಟ್ಟಲು ಬಯಸುತ್ತಿದೆ.

ಆರ್‌ಸಿಬಿ ಸಂಭಾವ್ಯ ತಂಡ

ಆರ್‌ಸಿಬಿ ಸಂಭಾವ್ಯ ತಂಡ

ದೇವದತ್ ಪಡಿಕ್ಕಲ್, ಜೋಶುವಾ ಫಿಲಿಪ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಗುರ್ಕೀರತ್ ಮನ್, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ಇಸುರು ಉದಾನಾ / ಆಡಮ್ ಜಂಪಾ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್

ಎಸ್‌ಆರ್‌ಹೆಚ್ ಸಂಭಾವ್ಯ ತಂಡ

ಎಸ್‌ಆರ್‌ಹೆಚ್ ಸಂಭಾವ್ಯ ತಂಡ

ಡೇವಿಡ್ ವಾರ್ನರ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ವಿಜಯ್ ಶಂಕರ್ / ಅಭಿಷೇಕ್ ಶರ್ಮಾ, ಜೇಸನ್ ಹೋಲ್ಡರ್, ರಶೀದ್ ಖಾನ್, ಸಂದೀಪ್ ಶರ್ಮಾ, ಶಹಬಾಜ್ ನದೀಮ್ / ಖಲೀಲ್ ಅಹ್ಮದ್, ಟಿ. ನಟರಾಜನ್

Story first published: Saturday, October 31, 2020, 16:17 [IST]
Other articles published on Oct 31, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+