ಐಪಿಎಲ್ 2020: ರೈನಾ ಹೆಸರಿನಲ್ಲಿರುವ ಮತ್ತೊಂದು ದಾಖಲೆ ಹಿಂದಿಕ್ಕಲಿದ್ದಾರಾ ರೋಹಿತ್?

ಭಾನುವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಟೂರ್ನಿಯ ಮೊದಲೆರಡು ಸ್ಥಾನದಲ್ಲಿರುವ ಈ ತಂಡಗಳ ನಡುವಿನ ಕಾದಾಟ ಸಾಕಷ್ಟು ಕುತೂಹಲಕಾರಿಯಾಗಿದೆ. ಟೂರ್ನಿಯಲ್ಲಿ ಎರಡು ಅರ್ಧ ಶತಕವನ್ನು ದಾಖಲಿಸಿದ್ದರೂ ಮುಂಬೈ ನಾಯಕ ರೋಹಿತ್ ಶರ್ಮಾ ಸ್ಥಿರತೆಯನ್ನು ಕಾಪಾಡಲು ಕಷ್ಟಪಡುತ್ತಿದ್ದಾರೆ.
ಆದರೆ ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅದ್ಭುತ ಪ್ರದರ್ಶನವನ್ನು ನೀಡಿ ಅರ್ಧ ಶತಕವನ್ನು ಬಾರಿಸಿದರೆ ಐಪಿಎಲ್‌ನಲ್ಲಿ ಮತ್ತೊಂದು ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಲಿದ್ದಾರೆ. ಸುರೇಶ್ ರೈನಾ ಜೊತೆಗೆ ಈ ದಾಖಲೆಯಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ಅರ್ಧ ಶತಕವನ್ನು ಬಾರಿಸಿದರೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧ ಶತಕ ಬಾರಿಸಿದ ಭಾರತೀಯ ಕ್ರಿಕೆಟಿಗರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದ್ದಾರೆ. ಸದ್ಯ ಸುರೇಶ್ ರೈನಾ ಹಾಗೂ ರೊಹಿತ್ ಶರ್ಮಾ ತಲಾ 38 ಅರ್ಧ ಶತಕಗಳೊಂದಿಗೆ ಈ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಐಪಿಎಲ್ 2020 ಆವೃತ್ತಿಯ ಪಂದ್ಯದಲ್ಲಿ ರೋಹಿತ್ ಶರ್ಮಾ ಎರಡು ಅರ್ಧ ಶತಕವನ್ನು ದಾಖಲಿಸಿದ್ದಾರೆ. ಆದರೆ ರೋಹಿತ್ ಶರ್ಮಾ ಬ್ಯಾಟ್‌ನಿಂದ ಅವರ ನೈಜ ಪ್ರದರ್ಶನ ಹೊರ ಬಂದಿಲ್ಲ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.
ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಈವರೆಗೆ ಶ್ರೇಷ್ಠ ಪ್ರದರ್ಶನವನ್ನು ನೀಡಿಕೊಂಡು ಬಂದಿದೆ. ಆಡಿರುವ 6 ಪಂದ್ಯಗಳಲ್ಲಿ ಕೇವಲ 1 ಪಂದ್ಯದಲ್ಲಿ ಸೋಲುಕಂಡಿದ್ದು ಐದರಲ್ಲಿ ಗೆಲುವು ಕಂಡಿದೆ. ಮುಂಬೈ ಇಂಡಿಯನ್ಸ್ ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು ಹಾಗೂ ಎರಡು ಸೋಲು ಕಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications