
ಐಪಿಎಲ್ ಅಂಗಳದಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಟೂರ್ನಿಯಲ್ಲಿ ಯಶಸ್ವಿಯಾಗಿ ಮುನ್ನಗ್ಗುತ್ತಿರುವ ಮುಂಬೈ ತಂಡಲ್ಲೆ ಚೆನ್ನೈ ಆರಂಭಿಕ ಪಂದ್ಯದಲ್ಲಿ ಸೋಲಿನ ರುಚಿ ತೋರಿಸುವಲ್ಲಿ ಯಶಸ್ವಿಯಾಗಿತ್ತು.
ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿದಿಲ್ಲ. ರೋಹಿತ್ ಶರ್ಮಾ ಎಡಗಾಲಿನ ಮಂಡಿರಜ್ಜು ಗಾಯಕ್ಕೀಡಾಗಿದ್ದು ಇಂದಿನ ಒಂದು ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ಕಿರಾನ್ ಪೊಲಾರ್ಡ್ ವಹಿಸಿಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ನಾಯಕ ರೋಹಿತ್ ಶರ್ಮಾ ಸ್ಥಾನಕ್ಕೆ ಸೌರಬ್ ತಿವಾರಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಈ ಹಿಂದಿನ ತಂಡವನ್ನೇ ಉಳಿಸಿಕೊಳ್ಳಲಾಗಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಮೂರಯ ಬದಲಾವಣೆಗಳು ಆಗಿದೆ. ಕೇದಾರ್ ಜಾಧವ್, ಪೀಯೂಷ್ ಚಾವ್ಲಾ ಹಾಗೂ ಶೇನ್ ವಾಟ್ಸನ್ ತಂಡದಿಂದ ಹೊರಗುಳಿದಿದ್ದು ಆ ಸ್ಥಾನಕ್ಕೆ ಜಗದೀಸನ್, ಋತುರಾಜ್ ಗಾಯಕ್ವಾಡ್ ಹಾಗೂ ಇಮ್ರಾನ್ ತಾಹೀರ್ ಕಾಣಿಸಿಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೌರಭ್ ತಿವಾರಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ (ನಾಯಕ), ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರಿತ್ ಬುಮ್ರಾ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಸ್ಯಾಮ್ ಕುರ್ರನ್, ಫಾಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಎನ್ ಜಗದೀಸನ್, ಎಂ.ಎಸ್.ಧೋನಿ (ವಿಕೆಟ್ ಕೀಪರ್/ನಾಯಕ), ಋತುರಾಜ್ ಗಾಯಕವಾಡ್, ರವೀಂದ್ರ ಜಡೇಜಾ, ದೀಪಕ್ ಚಹರ್, ಶಾರ್ದುಲ್ ಠಾಕೂರ್, ಜೋಶ್ ಹ್ಯಾಜಲ್‌ವುಡ್