For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಡೆಲ್ಲಿ ವಿರುದ್ಧ ಭರ್ಜರಿ ಜಯ ದಾಖಲಿಸಿದ ಮುಂಬೈ ಇಂಡಿಯನ್ಸ್

IPL 2020: MI vs DC Match 27 highlights in kannada

ಅಬುಧಾಬಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ತಂಡ ಭರ್ಜರಿ ಗೆಲುವನ್ನು ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ನಿಡಿದ 163 ರನ್‌ಗಳ ಗುರಿಯನ್ನು 5 ವಿಕೆಟ್ ಕಳೆದುಕೊಂಡು ಇನ್ನೂ ಎರಡು ಎಸೆತಗಳು ಇರುವಂತೆಯೆ ಮೀರಿ ನಿಂತಿತು. ಈ ಮೂಲಕ ಅಂಕಪಟ್ಟಿಯಲ್ಲಿ ಮುಂಬೈ ಅಗ್ರಸ್ಥಾನಕ್ಕೇರಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭಿಕ ಆಟಗಾರ ಶಿಖರ್ ಧವನ್ ಅರ್ಧ ಶತಕ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಉಪಯುಕ್ತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 162 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಿತು. ಶಿಖರ್ ಧವನ್ 69 ಹಾಗೂ ಶ್ರೇಯಸ್ ಅಯ್ಯರ್ 42 ರನ್‌ಗಳನ್ನು ಬಾರಿಸಿದ್ದರು.

ಡೆಲ್ಲಿ ನೀಡಿದ ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ವಿಕೆಟನ್ನು ಬೇಗನೆ ಕಳೆದುಕೊಂಡರೂ ಕ್ವಿಂಟನ್ ಡಿಕಾಕ್ ಹಾಗೂ ಸೂರ್ಯಕುಮಾರ್ ಯಾದವ್ ಭರ್ಕರಿ ಆಟವನ್ನು ಪ್ರದರ್ಶಿಸಿದರು. 36 ಎಸೆತಗಳನ್ನು ಎದುರಿಸಿದ ಡಿಕಾಕ್ 53 ರನ್ ಬಾರಿಸಿ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದರೆ, ಸೂರ್ಯಕುಮಾರ್ ಯಾದವ್ 32 ಎಸೆತಗಳಲ್ಲಿ 53 ರನ್ ಬಾರಿಸಿ ಮಿಂಚಿದರು.

ಅಂತಿಮವಾಗಿ ಮುಂಬೈ ಇಂಡಿಯನ್ಸ್ 19.4 ಓವರ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಟೂರ್ನಿಯಲ್ಲಿ ಐದು ಜಯವನ್ನು ದಾಖಲಿಸಿದ ಮುಂಬೈ ಅಂಕಪಟ್ಟಿಯಲ್ಲಿ ಡೆಲ್ಲಿಯನ್ನು ಹಿಂದಕ್ಕೆ ತಳ್ಳಿ ಮೊದಲ ಸ್ಥಾನಕ್ಕೆರಿದೆ.

Story first published: Monday, October 12, 2020, 10:13 [IST]
Other articles published on Oct 12, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+