Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಡೆಲ್ಲಿ-ಮುಂಬೈ ಮುಖಾಮುಖಿ, ಸಂಭಾವ್ಯ ಪ್ಲೇಯಿಂಗ್ XI, ಪಿಚ್ ರಿಪೋರ್ಟ್

IPL 2020: MI vs DC, Match 27, Preview, Predicted Playing 11, Pitch Report, Toss Timing, Weather Report

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದಿನ ಪಂದ್ಯ ತುಂಬಾ ಕುತೂಹಲ ಮೂಡಿಸಿದೆ. ಯಾಕೆಂದರೆ ಇಂದು ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ 27ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಡಲಿವೆ.

ಯುವಕರು ಹೆಚ್ಚಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಹೆಚ್ಚು ಬಲಶಾಲಿ ತಂಡವಾಗಿ ಕಾಣಿಸಿಕೊಂಡಿದೆ. ಆಡಿರುವ ಆರು ಪಂದ್ಯಗಳಲ್ಲಿ 5 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲೊ ಮೊದಲ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ 6ರಲ್ಲಿ 4 ಪಂದ್ಯಗಳನ್ನು ಜಯಿಸಿದೆ. ಈ ಪಂದ್ಯ 7.30 pmಗೆ ಆರಂಭವಾಗಲಿದ್ದು, 7 pmಗೆ ಟಾಸ್ ನಡೆಯಲಿದೆ.

ಪಂದ್ಯ ನಡೆಯುವ ದಿನ ಅಂದರೆ ಇಂದು ಅಬುಧಾಬಿಯಲ್ಲಿ ಗರಿಷ್ಠ ತಾಪಮಾನ 38°C ಇರಲಿದೆ. ಕನಿಷ್ಠ 28°C ಇರಲಿದೆ. ಉಳಿದ ದಿನಗಳಿಗೆ ಹೋಲಿಸಿದರೆ ಈ ದಿನ ಕೊಂಚ ತಾಪಮಾನ ಕಡಿಮೆ ಇರಲಿದೆ. ಅಬುಧಾಬಿ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲ ಮಾಡಿಕೊಡಲಿದೆ. ಇದು ಕೊಂಚ ಸ್ಲೋ ಪಿಚ್ ಆಗಿದೆ.

ಮುಂಬೈ ಸಂಭಾವ್ಯ ತಂಡ: ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹಾರ್/ಜಯಂತ್ ಯಾದವ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.

ಡೆಲ್ಲಿ ಸಂಭಾವ್ಯ ತಂಡ: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ಸಿ), ರಿಷಭ್ ಪಂತ್ (ವಿಕೆ), ಮಾರ್ಕಸ್ ಸ್ಟೋಯಿನಿಸ್, ಶಿಮ್ರಾನ್ ಹೆಟ್ಮೈರ್, ಆಕ್ಸಾರ್ ಪಟೇಲ್, ಹರ್ಷಲ್ ಪಟೇಲ್, ಆರ್ ಅಶ್ವಿನ್, ಕಾಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ.

Story first published: Sunday, October 11, 2020, 15:32 [IST]
Other articles published on Oct 11, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+