ಐಪಿಎಲ್ 2020: ಮುಂಬೈ vs ಡೆಲ್ಲಿ, ಟಾಸ್ ವರದಿ ಹಾಗೂ ಪ್ಲೇಯಿಂಗ್ XI

ಐಪಿಎಲ್‌ನಲ್ಲಿ ಭಾನುವಾರದ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೇಯಸ್ ಐಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಎರಡು ತಂಡಗಳು ಕೂಡ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿಕೊಂಡು ಬಂದಿದೆ. ಡೆಲ್ಲಿ ಕ್ಯಾಪಿಟಲ್ಸ್ ಆಡಿದ ಆರು ಪಂದ್ಯಗಳಲ್ಲಿ ಐದು ಗೆಲುವು ಸಾಧಿಸಿದ್ದರೆ ಮುಂಬೈ ಇಂಡಿಯನ್ಸ್ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು ಕಂಡಿದೆ. ಹೀಗಾಗಿ ಈ ಎರಡು ತಂಡಗಳು ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ.
ಇಂದಿನ ಪಂದ್ಯಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದ ಕಾರಣ ರಹಾನೆ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಶಿಮ್ರಾನ್ ಹೇಟ್ಮೇರ್ ಕೂಡ ಈ ಪಂದ್ಯದಿಂದ ಹೊರಗುಳಿದಿದ್ದು ಅಲೆಕ್ಸ್ ಕ್ಯಾರಿ ವಿಕೆಟ್ ಕೀಪಿಂಗ್ ಜವಾಬ್ಧಾರಿ ಹೊತ್ತುಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ಕಳೆದ ಪಂದ್ಯದ ತಂಡವನ್ನೇ ಉಳಿಸಿಕೊಂಡಿದೆ.
ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಆಕ್ಸರ್ ಪಟೇಲ್, ಹರ್ಷಲ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications