For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಮುಂಬೈ vs ಕೊಲ್ಕತಾ, ಹೆಡ್ ಟು ಹೆಡ್ ಅಂಕಿಅಂಶ

IPL 2020: MI vs KKR head-to-head records and Players to Watch Out For

ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತಾ ನೈಟ್ ರೈಡರ್ಸ್ ತಂಡಗಳು ಐಪಿಎಲ್‌ನ 32ನೇ ಪಂದ್ಯದಲ್ಲಿ ಮತ್ತೊಮ್ಮೆ ಮುಖಾಮುಖಿಯಾಗುತ್ತಿದೆ. ಅಬುಧಾಬಿಯ ಶೇಕ್ ಝಾಯೇದ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದ ಸಂದರ್ಭದಲ್ಲಿ ಮುಂಬೈ ತಂಡ ಕೆಕೆಆರ್ ತಂಡವನ್ನು ಭರ್ಜರಿಯಾಗಿ ಸೋಲಿಸುವಲ್ಲಿ ಯಶಸ್ವಿಯಾಗಿತ್ತು.

ಐಪಿಎಲ್ ಇತಿಹಾಸದಲ್ಲಿ ಈ ಎರಡು ತಂಡಗಳು ಈವರೆಗೆ 26 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಭಾರೀ 20 ಬಾರಿ ಗೆಲ್ಲುವ ಮೂಲಕ ಮುಂಬೈ ಭಾರೀ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಕೆಕೆಆರ್ ಗೆದ್ದಿರುವುದು ಉಳಿದ ಆರು ಪಂದ್ಯಗಳಲ್ಲಿ ಮಾತ್ರ.

ಇನ್ನು ಟೂರ್ನಿಯ ಆರಂಭಿಕ ಹಂತದಲ್ಲಿ ಮುಂಬೈ ಹಾಗೂ ಕೆಕೆಆರ್ ಎದುರಾಳಿಗಳಾಗಿ ಕಣಕ್ಕಿಳಿದಿದ್ದ ಸಂದರ್ಭದಲ್ಲಿ ಮುಂಬೈ ಕೊಲ್ಕತಾ ತಂಡವನ್ನು 49 ರನ್‌ಗಳ ಅಂತರದಿಂದ ಮಣಿಸಿತ್ತು. ನಾಯಕ ರೊಹಿತ್ ಶರ್ಮಾ 80 ರನ್‌ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಸಿದ 47 ರನ್‌ಗಳ ಸಹಾಯದಿಂದ ಮುಂಬೈ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 195 ರನ್ ಗಳಿಸಿತ್ತು. ಇದನ್ನು ಬೆನ್ನಟ್ಟಿದ ಕೆಕೆಆರ್ 146 ರನ್‌ಗಳಿಗೆ ತನ್ನ ಹೋರಾಟವನ್ನು ಅಂತ್ಯಗೊಳಿಸಿತ್ತು.

ಇನ್ನು ಕಳೆದ ಐದು ಪಂದ್ಯಗಳ ಫಲಿತಾಂಶವನ್ನು ಗಮನಿಸಿದಾಗ ಐದರಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದಿರುವ ಮುಂಬೈ ಉತ್ತಮ ಫಾರ್ಮ್‌ನಲ್ಲಿದೆ. ಕೊಲ್ಕತಾ ತಂಡ ಕಳೆದ ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದಿದ್ದು ಎರಡರಲ್ಲಿ ಸೋಲು ಕಂಡಿದೆ.

ಇನ್ನು ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಎರಡನೇ ಸ್ಥಾನವನ್ನು ಹೊಂದಿದೆ. ಕೊಲ್ಕತಾ ನೈಟ್ ರೈಡರ್ಸ್ ನಾಲ್ಕನೇ ಸ್ಥಾನವನ್ನು ಆಕ್ರಮಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಂದಿನ ಪಂದ್ಯದ ಬಳಿಕ ಮತ್ತೆ ಅಂಕಪಟ್ಟಿಯಲ್ಲಿ ಪ್ರಮುಖ ಬದಲಾವಣೆಗಳು ಆಗಲಿದೆ.

Story first published: Friday, October 16, 2020, 10:39 [IST]
Other articles published on Oct 16, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+