ಐಪಿಎಲ್ 2020: ಮುಂಬೈ ಇಂಡಿಯನ್ಸ್ vs ಕಿಂಗ್ಸ್ ಇಲೆವೆನ್ ಪಂಜಾಬ್ ಸಂಭಾವ್ಯ ತಂಡ

ಮೂರು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಹೊರತಾಗಿಯೂ ಕಿಂಗ್ಸ್ ಇಲವೆನ್ ಪಂಜಾಬ್ ತಂಡ ನಿರೀಕ್ಷಿತ ಫಲಿತಾಂಶ ಪಡೆಯುವಲ್ಲಿ ವಿಫಲವಾಗಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಸ್ಥಿತಿಯೂ ಭಿನ್ನವಾಗಿಲ್ಲ. ಹೀಗಾಗಿ ಇಂದಿನ ಈ ಪಂದ್ಯದ ಗೆಲುವು ಎರಡೂ ತಂಡಗಳ ಪಾಲಿಗೆ ಬಹಳ ಮಹತ್ವವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ತಂಡಗಳಲ್ಲಿ ಆಟಗಾರರ ಆಯ್ಕೆಯೂ ತಂಡದಲ್ಲಿ ಮಹತ್ವವನ್ನು ಪಡೆದುಕೊಂಡಿದೆ.
ಇನ್ನು ಅಬುದಾಭಿಯಲ್ಲಿ ಇಂದಿನ ಪಂದ್ಯ ನಡೆಯಲಿದ್ದು ಈವರೆಗಿನ ಪಂದ್ಯಗಳಲ್ಲಿ ಸ್ಪಿನ್ನರ್‌ಗಳು ಮಿಂಚಿದ್ದಾರೆ. ಇಂದಿನ ಪಂದ್ಯದಲ್ಲೂ ಸ್ಪಿನ್ ಬೌಲಿಂಗ್ ವಿಭಾಗ ಮೇಲುಗೈ ಸಾಧಿಸುವುದು ಬಹುತೇಕ ಪಕ್ಕಾ. ಜೊತೆಗೆ ಮೊದಲು ಬ್ಯಾಟಿಂಗ್ ಮಾಡಿದ ತಂಡ 160 ರನ್ ಗಳಿಸಿದರೂ ಸವಾಲಿನ ಮೊತ್ತವೇ ಆಗಿರಲಿದೆ.
ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ಐಪಿಎಲ್ ಇತಿಹಾಸದಲ್ಲಿ ಈವರೆಗೆ 24 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಕಿಂಗ್ಸ್ XI ಪಂಜಾಬ್ ತಂಡ 11 ಗೆಲುವು ಕಂಡಿದ್ದರೆ ಮುಂಬೈ ಇಂಡಿಯನ್ಸ್ 13 ಗೆಲುವು ಸಾಧಿಸಿ ಈ ಮುಖಾಮುಖಿಯಲ್ಲಿ ಮುಂದಿದೆ.
ಸಂಭಾವ್ಯ ತಂಡಗಳು
ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್ ನೈಲ್, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್, ಜಸ್ಪ್ರಿತ್ ಬುಮ್ರಾ
ಕಿಂಗ್ಸ್ ಇಲೆವೆನ್ ಪಂಜಾಬ್: ಕೆ.ಎಲ್. ರಾಹುಲ್ (ನಾಯಕ ಹಾಗೂ ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಕರುಣ್ ನಾಯರ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ಸರ್ಫರಾಜ್ ಖಾನ್, ಜೇಮ್ಸ್ ನೀಶಮ್, ರವಿ ಬಿಷ್ಣೋಯ್, ಮುಜೀಬ್ ಉರ್ ರಹಮಾನ್, ಮೊಹಮ್ಮದ್ ಶಮಿ, ಇಶಾನ್ ಪೊರೆಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications