ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಭಾನುವಾರ (ಅಕ್ಟೋಬರ್ 18) ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ 36ನೇ ಪಂದ್ಯ ಕುತೂಹಲಕಾರಿ ಎನಿಸಲಿದೆ. ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ವೆಸ್ಟ್ ಇಂಡೀಸ್ ಸ್ಫೋಟಕ ದಾಂಡಿಗರಾದ ಕ್ರಿಸ್ ಗೇಲ್ ಮತ್ತು ಕೀರನ್ ಪೊಲಾರ್ಡ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ.
ಈವರೆಗೆ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆದ್ದಿರುವ ರೋಹಿತ್ ಶರ್ಮಾ ಪಡೆ ಐಪಿಎಲ್ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. 8ರಲ್ಲಿ ಎರಡೇ ಗೆಲುವು ಕಂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಕೊನೇ ಸ್ಥಾನದಲ್ಲಿದೆ. ಇಂದು ಇತ್ತಂಡಗಳ ಈ ಪಂದ್ಯ 7.30 pmಗೆ ನಡೆಯಲಿದ್ದು, ಟಾಸ್ 7 pmಗೆ ನಡೆಯಲಿದೆ.
ಸಂಶಯಾಸ್ಪದ ಬೌಲಿಂಗ್ ಶೈಲಿ: ಕೆಕೆಆರ್ನ ಸುನಿಲ್ ನರೈನ್ ನಿರಾಳ
ಮುಂಬೈ ಸಂಭಾವ್ಯ ತಂಡ: ಕ್ವಿಂಟನ್ ಡಿ ಕಾಕ್ (ವಿಕೆ), ರೋಹಿತ್ ಶರ್ಮಾ (ಸಿ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಟ್ರೆಂಟ್ ಬೌಲ್ಟ್ / ಮಿಚೆಲ್ ಮೆಕ್ಲೆನಾಘನ್, ಜಸ್ಪ್ರಿತ್ ಬೂಮ್ರಾ.
ಪಂಜಾಬ್ ಸಂಭಾವ್ಯ ತಂಡ: ಕೆ.ಎಲ್. ರಾಹುಲ್ (ಸಿ / ಡಬ್ಲ್ಯೂಕೆ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಕೆ ಗೌತಮ್, ಕ್ರಿಸ್ ಜೋರ್ಡಾನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್.