ಐಪಿಎಲ್ 2020: ಮುಂಬೈ vs ಪಂಜಾಬ್, ಟಾಸ್ ವರದಿ ಹಾಗೂ ಪ್ಲೇಯಿಂಗ್ 11

ಐಪಿಎಲ್‌ನಲ್ಲಿ ಭಾನುವಾರದ ಎರಡನೇ ಕಾದಾಟದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್‌ಗೆ ಮುಂದಿನ ಪ್ರತಿಯೊಂದು ಪಂದ್ಯಗಳು ಕೂಡ ಮಹತ್ವದ್ದಾಗಿದ್ದು ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ಕಠಿಣ ಸವಾಲನ್ನು ಒಡ್ಡುವ ನಿರೀಕ್ಷೆಯಿದೆ.
ಕಳೆದ ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ಗೆಲುವನ್ನು ಕಂಡಿದೆ. ಅದರಲ್ಲೂ ಮುಂಬೈ ತಂಡ ಸತತ ಗೆಲುವುಗಳ ಉತ್ಸಾಹದಲ್ಲಿದೆ. ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಎರಡು ತಂಡಗಳು ಕೂಡ ಯಾವುದೇ ಬದಲಾವಣೆಗಳನ್ನು ಮಾಡಿಕೊಳ್ಳದೆ ಕೊನೆಯ ಪಂದ್ಯದಲ್ಲಿ ಆಡಿದ ತಂಡದೊಂದಿಗೇ ಕಣಕ್ಕಿಳಿದಿದೆ.
ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
ಕೆ.ಎಲ್. ರಾಹುಲ್ (ನಾಯಕ ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications