
ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದೆ. ಮುಂಬೈ ಇಂಡಿಯನ್ಸ್ ಈ ಬಾರಿಯ ಟೂರ್ನಿಯಲ್ಲಿ ಈವರೆಗೆ ಐದು ಪಂದ್ಯಗಳನ್ನಾಡಿದ್ದು ಎರಡರಲ್ಲಿ ಸೋಲು ಕಂಡಿದ್ದರೆ ರಾಜಸ್ಥಾನ್ ರಾಯಲ್ಸ್ ನಾಲ್ಕು ಪಂದ್ಯಗಳನ್ನು ಆಡಿದ್ದು ಎರಡು ಗೆಲುವು ಎರಡು ಸೋಲು ಕಂಡಿದೆ.
ಈ ಎರಡು ತಂಡಗಳು ಐಪಿಎಲ್ ಇತಿಹಾಸದಲ್ಲಿ ಈವರೆಗೆ ಒಟ್ಟು 21 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಎರಡು ತಂಡಗಳು ತಲಾ 10 ಪಂದ್ಯಗಳಲ್ಲಿ ಗೆಲುವು ಹಾಗೂ 10 ಪಂದ್ಯಗಳಲ್ಲಿ ಸೋಲು ಕಂಡಿದ್ದು ಸಮಬಲವನ್ನು ಸಾಧಿಸಿದೆ. 2009ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.
ಇನ್ನು ಇತ್ತೀಚಿನ ಐದು ಪಂದ್ಯಗಳ ಫಲಿತಾಂಶವನ್ನು ಗಮನಿಸಿದರೆ ರಾಜಸ್ಥಾನ್ ರಾಯಲ್ಸ್ ಈ ಹಣಾಹಣಿಯಲ್ಲಿ ಸ್ಪಷ್ಟ ಮೇಲುಗೈ ಸಾಧಿಸಿದೆ. ಕೊನೆಯ ಐದು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಐದರಲ್ಲಿ ಗೆದ್ದುಕೊಂಡಿದೆ. ಕಳೆದ ಆವೃತ್ತಿಯ ಅಂತಿಮ ಪಂದ್ಯದಲ್ಲಿ ಮಾತ್ರವೇ ರಾಜಸ್ಥಾನ್ ರಾಯಲ್ಸ್ ಮುಂಬೈಗೆ ಶರಣಾಗಿದೆ.
ಎರಡು ತಂಡಗಳ ಆಟಗಾರರ ಪ್ರದರ್ಶನವನ್ನು ಗಮನಿಸಿದರೆ ಮುಂಬೈ ಇಂಡಿಯನ್ಸ್ ಪರವಾಗಿ ಕಣಕ್ಕಿಳಿಯುತ್ತಿದ್ದ ಅಜಿಂಕ್ಯ ರಹಾನೆ(ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯನಾಗಿದ್ದಾರೆ) 409 ರನ್ ಗಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರವಾಗಿ ಸಂಜು ಸ್ಯಾಮ್ಸನ್ ಅತ್ಯುತ್ತಮ ಪ್ರದರ್ಶನವನ್ನು ನೀಡಿದ ದಾಖಲೆ ಹೊಂದಿದ್ದು 431 ರನ್ ಗಳಿಸಿದ್ದಾರೆ.
ಇನ್ನು ಈ ಎರಡು ತಂಡಗಳ ಮುಖಾಮುಖಿಯ ಸಂದರ್ಭದಲ್ಲಿ ರಾಜಸ್ಥಾನ್ ರಾಯಲ್ಸ್ ಪರವಾಗಿ ಧವಳ್ ಕುಲಕರ್ಣಿ 17 ವಿಕೆಟ್ ಪಡೆದಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರವಾಗಿ ಶೇನ್ 13 ವಿಕೆಟ್ ಕಿತ್ತಿದ್ದಾರೆ. ಮುಂಬೈ ಇಂಡಿಯನ್ಸ್ ತಂಡ 212/6 ವಿಕೆಟ್ ಕಿತ್ತಿರುವುದು ಈ ಎರಡು ತಂಡಗಳ ಮುಖಾಮುಖಿಯಲ್ಲೊ ಈವರೆಗಿನ ಅತಿ ಹೆಚ್ಚು ಸ್ಕೋರ್ ಆಗಿದ್ದರೆ, ಆರ್‌ಆರ್ 208/7 ಗಳಿಸಿದ್ದು ಹೈಯೆಸ್ಟ್ ಸ್ಕೋರ್ ಎನಿಸಿದರೆ.