For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಸಂಭಾವ್ಯ ತಂಡ

IPL 2020: MI vs RR, Match 20 : Preview, Predicted Playing 11

ಐಪಿಎಲ್‌ನಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತದೆ. ಮುಂಬೈ ಇಂಡಿಯನ್ಸ್ ಆರಂಭದಲ್ಲಿ ನೀರಸ ಪ್ರದರ್ಶನ ನೀಡಿದ ಬಳಿಕ ಈಗ ಮತ್ತೆ ಗೆಲುವಿನ ಲಯಕ್ಕೆ ಮರಳಿದಂತೆ ಕಂಡುಬರುತ್ತಿದೆ. ಆಡಿದ ಐದು ಪಂದ್ಯಗಳಲ್ಲಿ ಮುಂಬೈ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎರಡರಲ್ಲಿ ಸೋಲು ಅನುಭವಿಸಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ಅಬ್ಬರದ ಆರಂಭವನ್ನು ಪಡೆದುಕೊಂಡರೂ ಬಳಿಕ ಸತತ ಎರಡು ಪಂದ್ಯಗಳಲ್ಲಿ ನೀರಸ ಪ್ರದರ್ಶನ ನಿಡುವ ಮೂಲಕ ಸೋಲು ಅನುಭವಿಸಿದೆ.

ಮುಂಬೈ ಇಂಡಿಯನ್ಸ್ ತಂಡದಲ್ಲಿ ಬಹುತೇಕ ಬ್ಯಾಟ್ಸ್‌ಮನ್‌ಗಲು ಉತ್ತಮ ಫಾರ್ಮ್‌ನಲ್ಲಿದ್ದು ತಂಡಕ್ಕೆ ನೆರವಾಗುತ್ತಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಮುಂಬೈ ಅತ್ಯುತ್ತಮ ಪ್ರದರ್ಶನವನ್ನು ನೀಡುವಲ್ಲಿ ಸಫಲವಾಗುತ್ತಿದೆ. ಚೆನ್ನೈ ವಿರುದ್ಧ ಆರಂಭಿಕ ಪಂದ್ಯದಲ್ಲಿ ಕಂಡ ವೈಫಲ್ಯಗಳನ್ನು ಸರಿ ಮಾಡಿಕೊಂಡು ಮುನ್ನುಗ್ಗುವಲ್ಲಿ ಮುಂಬೈ ಇಂಡಿಯನ್ಸ್ ಕಳೆದ ನಾಲ್ಕು ಪಂದ್ಯಗಳಲ್ಲಿ ಸಫಲವಾಗಿದೆ. ಇದರಲ್ಲಿ ಆರ್‌ಸಿಬಿ ವಿರುದ್ಧದ ಒಂದು ಪಂದ್ಯವನ್ನು ಮಾತ್ರ ಸೂಪರ್ ಓವರ್‌ನಲ್ಲಿ ಸೋಲು ಕಂಡಿದೆ.

ಇನ್ನು ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ ಮೂಲಕ ಅಬ್ಬರಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಕೊನೆಯ ಎರಡು ಪಂದ್ಯಗಳನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆಡಿದ್ದು ಈ ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿ ಸೋಲು ಕಂಡಿದೆ. ನಾಯಕ ಸ್ಟೀವ್ ಸ್ಮಿತ್ ಹಾಗೂ ಸಂಜು ಸ್ಯಾಮ್ಸನ್ ಅವರನ್ನೇ ಹೆಚ್ಚಾಗಿ ಈ ತಂಡ ನೆಚ್ಚಿಕೊಂಡಿದೆ.

ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರಿತ್ ಬುಮ್ರಾ.

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ: ಜೋಸ್ ಬಟ್ಲರ್ (ನಾಯಕ), ಯಶಸ್ವಿ ಜೈಸ್ವಾಲ್ / ರಾಬಿನ್ ಉತ್ತಪ್ಪ, ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್ (ನಾಯಕ), ರಿಯಾನ್ ಪರಾಗ್. ಮಹಿಪಾಲ್ ಲೋಮರ್, ಟಾಮ್ ಕರ್ರನ್, ರಾಹುಲ್ ತಿವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್ / ವರುಣ್ ಆರನ್.

Story first published: Tuesday, October 6, 2020, 13:20 [IST]
Other articles published on Oct 6, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+