ಐಪಿಎಲ್: ಮತ್ತೊಂದು ಪಂದ್ಯದಲ್ಲೂ ರೋಹಿತ್ ಶರ್ಮಾ ವಿಶ್ರಾಂತಿ ಸಾಧ್ಯತೆ

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 45ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಕಾದಾಡಲಿವೆ. ಮುಂಬೈ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲೂ ಮೈದಾನಕ್ಕಿಳಿಯೋದು ಅನುಮಾನವೆಂಬಂತಾಗಿದೆ.
ಗಾಯಕ್ಕೀಡಾಗಿರುವ ರೋಹಿತ್ ಶರ್ಮಾ, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆಡಿರಲಿಲ್ಲ. ರೋಹಿತ್ ಸಂಪೂರ್ಣವಾಗಿ ಚೇತರಿಕೊಂಡಿಲ್ಲವಾದ್ದರಿಂದ ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲೂ ಆಡೋದು ಅನುಮಾನ. ಇಂದಿನ ಪಂದ್ಯದಲ್ಲಿ ರೋಹಿತ್ ಬದಲು ಮನೋಜ್ ತಿವಾರಿ ಆಡುವ ನಿರೀಕ್ಷೆಯಿದೆ.
ಅಕ್ಟೋಬರ್ 28ರಂದು ಮುಂಬೈ ಇಂಡಿಯನ್ಸ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂದ್ಯವಿದೆ. ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಶರ್ಮಾ ಒಂದು ವೇಳೆ ಆಡದಿದ್ದರೆ, ಆರ್‌ಸಿಬಿ ಪಂದ್ಯದ ವೇಳೆ ರೋಹಿತ್ ಸಂಪೂರ್ಣ ಚೇತರಿಸಿಕೊಂಡು ಮೈದಾನಕ್ಕಿಳಿಯಬಹುದು.
ಆಡಿರುವ 10 ಪಂದ್ಯಗಳಲ್ಲಿ 7 ಜಯ ದಾಖಲಿಸಿರುವ ಮುಂಬೈ ಇಂಡಿಯನ್ಸ್ ಸದ್ಯದ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. 11ರಲ್ಲಿ 4 ಗೆಲುವು ಕಂಡಿರುವ ರಾಜಸ್ಥಾನ್ ರಾಯಲ್ಸ್ 7ನೇ ಸ್ಥಾನದಲ್ಲಿದೆ. ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಳ್ಳಲು ರಾಜಸ್ಥಾನ್‌ಗೆ ಈ ಗೆಲುವು ಮುಖ್ಯವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications