ಐಪಿಎಲ್ 2020: ಮುಂಬೈ vs ಹೈದರಾಬಾದ್, ಸಮಯ, ಸಂಭಾವ್ಯ ತಂಡ

ಐಪಿಎಲ್‌ನ 17ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾದಲಿದೆ. ಶಾರ್ಜಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬಲಿಷ್ಠ ಬೌಲಿಂಗ್ ಪಡೆ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಬಲದ ನಡುವಿನ ಕಾದಾಟವೆನಿಸಿದೆ. ಹೀಗಾಗಿ ಈ ಪಂದ್ಯ ಕುತೂಹಲಕಾರಿಯಾಗಿದೆ. ಈ ಪಂದ್ಯ ಇಂದು ಮಧ್ಯಾಹ್ನ 3:30 ರಿಂದ ಆರಂಭವಾಗಲಿದೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ಈವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದು ಇದರಲ್ಲಿ ಎರಡು ಗೆಲುವು ಹಾಗೂ ಎರಡು ಸೋಲು ಕಂಡಿದೆ. ಅದರಲ್ಲೂ ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗಳಿಸಿದ 48 ರನ್‌ಗಳ ಭರ್ಜರಿ ಗೆಲುವು ಮುಂಬೈ ಇಂಡಿಯನ್ಸ್‌ಗೆ ದೊಡ್ಡ ಬಲವನ್ನು ತುಂಬಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಕೂಡ ಇತ್ತೀಚಿನ ಪಂದ್ಯಗಳಲ್ಲಿ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಸೋಲು ಕಂಡು ಶೋಚನೀಯ ಸ್ಥಿತಿಯಲ್ಲಿತ್ತು, ಆದರೆ ಬಳಿಕ ತಿರುಗಿ ಬೀಳುವಲ್ಲಿ ಯಶಸ್ವಿಯಾಗಿದೆ. ಇಂದಿನ ಪಂದ್ಯದಲ್ಲಿ ಸತತ ಎರಡು ಪಂದ್ಯಗಳ ಗೆಲುವನ್ನು ಕಂಡಿದೆ. ಸಿಎಸ್‌ಕೆ ವಿರುದ್ಧ ನಡೆದ ಕೊನೆಯ ಪಂದ್ಯದಲ್ಲಿ 7 ರನ್‌ಗಳ ಅಂತರದ ಗೆಲುವನ್ನು ಪಡೆದುಕೊಂಡಿತ್ತು
ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೀರಾನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಾಹರ್, ಟ್ರೆಂಟ್ ಬೋಲ್ಟ್, ಜಸ್ಪ್ರಿತ್ ಬೂಮ್ರಾ.
ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ : ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್, ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಪ್ರಿಯಮ್ ಗರ್ಗ್, ರಶೀದ್ ಖಾನ್, ಭುವನೇಶ್ವರ್ ಕುಮಾರ್ / ಸಿದ್ದಾರ್ಥ್ ಕೌಲ್, ಖಲೀಲ್ ಅಹ್ಮದ್, ಟಿ ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications