Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಮುಂಬೈ vs ಹೈದರಾಬಾದ್, ಟಾಸ್ ವರದಿ, ಅಂತಿಮ ತಂಡಗಳು

IPL 2020: MI vs SRH, toss report and playing XI

ಐಪಿಎಲ್‌ನ 17ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಶಾರ್ಜಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.

ಎರಡೂ ತಂಡಗಳು ನಾಲ್ಕು ಪಂದ್ಯಗಳನ್ನು ಆಡಿದ್ದು ತಲಾ ಎರಡಲ್ಲಿ ಗೆಲುವನ್ನು ಕಂಡಿದ್ದರೆ ಎರಡು ಪಂದ್ಯಗಳನ್ನು ಸೋತಿದೆ. ಸದ್ಯ ಅಂಕಪಟ್ಟಿಯಲ್ಲಿ ಮುಂಬೈ ಮೂರನೇ ಸ್ಥಾನದಲ್ಲಿದ್ದರೆ ಹೈದರಾಬಾದ್ ನಾಲ್ಕನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಉತ್ತಮ ಅಂತರವನ್ನು ಕಾಪಾಡಿಕೊಂಡು ಗೆದ್ದರೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವ ಅವಕಾಶವೂ ಈ ತಂಡಗಳಿಗೆ ಇದೆ.

ಇನ್ನು ಮುಂಬೈ ತಂಡ ಕಳೆದ ಪಂದ್ಯದಲ್ಲಿ ಇದ್ದ ತಂಡವನ್ನೇ ಉಳಿಸಿಕೊಂಡಿದೆ. ಆದರೆ ಹೈದರಾಬಾದ್ ತಂಡದಲ್ಲಿ ಎರಡು ಬದಲಾವಣೆಯಾಗಿದೆ. ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದ ಭುವನೇಶ್ವರ್ ಕುಮಾರ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಇನ್ನೋರ್ವ ವೇಗಿ ಖಲೀಲ್ ಅಹ್ಮದ್ ಕೂಡ ಇಂದಿನ ಆಡುವ ಬಳಗದಲ್ಲಿ ಇಲ್ಲ. ಈ ಎರಡು ಸ್ಥಾನಗಳಿಗೆ ಸಿದ್ಧಾರ್ಥ್ ಕೌಲ್ ಹಾಗೂ ಸಂದೀಪ್ ಶರ್ಮಾ ಅವಕಾಶ ಪಡೆದಿದ್ದಾರೆ.

ಮುಂಬೈ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

ಹೈದರಾಬಾದ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಮ್ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ರಶೀದ್ ಖಾನ್, ಸಂದೀಪ್ ಶರ್ಮಾ, ಸಿದ್ದಾರ್ಥ್ ಕೌಲ್, ಟಿ ನಟರಾಜನ್

Story first published: Tuesday, October 6, 2020, 16:45 [IST]
Other articles published on Oct 6, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+