ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: 5 ಸಿಕ್ಸರ್ ಬಾರಿಸಿ ಶರ್ಮಾ, ರೈನಾ ಜೊತೆ ಎಲೈಟ್ ಲಿಸ್ಟ್‌ಗೆ ಸೇರಿಕೊಳ್ಳುತ್ತಾರಾ ಧೋನಿ?

 Ipl 2020: Ms Dhoni 5 Sixes Away From Becoming 3rd Indian Batsmen To Hit 300 T20 Sixes

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಟಿ20 ಕ್ರಿಕೆಟ್‌ನಲ್ಲಿ ಸಾಕಷ್ಟು ದಾಖಲೆಗಳನ್ನು ಹಲವಾರು ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಎಂಎಸ್ ಧೋನಿ ಮತ್ತೆರಡು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದರು. ಟಿ20 ಕ್ರಿಕೆಟ್‌ನಲ್ಲಿ 250 ಕ್ಯಾಚ್ ಪಡೆದ ವಿಕೆಟ್ ಕೀಪರ್ ಹಾಗೂ ಐಪಿಎಲ್‌ನಲ್ಲಿ 100 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ ಮೊದಲ ಹಾಗೂ ಏಕೈಕ ನಾಯಕ ಎಂಬ ದಾಖಲೆಯನ್ನು ಬರೆದುಕೊಂಡಿದ್ದರು.

ಈಗ ಇಂದು ಧೋನಿ ನೇತೃತ್ವದ ಸಿಎಸ್‌ಕೆ ತಂಡ ತನ್ನ ಎರಡನೇ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ವಿಶೇಷ ಸಾಧನೆಯನ್ನು ಮಾಡುವ ಅವಕಾಶವಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ 5 ಸಿಕ್ಸರ್‌ಗಳನ್ನು ಸಿಡಿಸಿದಲು ಸಾಧ್ಯವಾದರೆ ಟಿ20 ಕ್ರಿಕೆಟ್‌ನಲ್ಲಿ 300 ಸಿಕ್ಸರ್ ಸಿಡಿಸಿದ 3ನೇ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಒಳಗಾಗಲಿದ್ದಾರೆ.

ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟ

ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆಯನ್ನು ಮಾಡಿದ ಆಟಗಾರರ ಪೈಕಿ ಈಗ ಇಬ್ಬರು ಭಾರತೀಯ ಆಟಗಾರರು ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೊಹಿತ್ ಶರ್ಮಾ ಹಾಗೂ ಸುರೇಶ್ ರೈನಾ ಈ ಸಾಧನೆಯನ್ನು ಮಾಡಿದ್ದಾರೆ.

ಸದ್ಯ ಎಂಎಸ್ ಧೋನಿ 295 ಸಿಕ್ಸರ್‌ಗಳನ್ನು ತಮ್ಮ ಖಾತೆಯಲ್ಲಿ ಹೊಂದಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತೀಯ ಆಟಗಾರ ರೊಹಿತ್ ಶರ್ಮಾ 361 ಸಿಕ್ಸರ್ ಸಿಡಿಸಿದ್ದರೆ ಸುರೇಶ್ ರೈನಾ 311 ಸಿಕ್ಸರ್‌ಗಳನ್ನು ದಾಖಲಿಸಿದ್ದಾರೆ.

ಪಡಿಕ್ಕಲ್ ಪದಾರ್ಪಣೆಗೆ ಅರ್ಧ ಶತಕದ ಮೆರುಗು: ಐಪಿಎಲ್‌ನಲ್ಲೂ ಸಂಪ್ರದಾಯ ಮುಂದುವರಿಸಿದ ಕನ್ನಡಿಗ!ಪಡಿಕ್ಕಲ್ ಪದಾರ್ಪಣೆಗೆ ಅರ್ಧ ಶತಕದ ಮೆರುಗು: ಐಪಿಎಲ್‌ನಲ್ಲೂ ಸಂಪ್ರದಾಯ ಮುಂದುವರಿಸಿದ ಕನ್ನಡಿಗ!

14 ತಿಂಗಳ ಬಳಿಕ ಮೊದಲ ಬಾರಿಗೆ ಎಂಎಸ್ ಧೋನಿ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಗೆಲುವಿನ ಸನಿಹಕ್ಕೆ ಬಂದ ಸಂದರ್ಭದಲ್ಲಿಕ್ರೀಸ್‌ಗೆ ಇಳಿದ ಧೋನಿ ಎರಡು ಎಸೆತವನ್ನಷ್ಟೇ ಎದುರಿಸಿ ಯಾವುದೇ ರನ್ ಗಳಿಸದೆ ಅಜೇಯವಾಗುಳಿದಿದ್ದರು.

Story first published: Tuesday, September 22, 2020, 14:37 [IST]
Other articles published on Sep 22, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X