For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಮುಂಬೈ ಇಂಡಿಯನ್ಸ್‌ಗೆ 163 ರನ್‌ಗಳ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

IPL 2020: Mumbai need 163 runs to win against Delhi

ಅಬುದಾಭಿಯ ಶೇಕ್ ಝಾಯೆದ್ ಕ್ರಿಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಟವನ್ನು ನಡೆಸುತ್ತಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ತಂಡಕ್ಕೆ 163 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.

ಟೂರ್ನಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿಕೊಂಡು ಬಂದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂದಿನ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆಯಲಿಲ್ಲ. ಮೊದಲ ಓವರ್‌ನ ಮೂರನೇ ಎಸೆತದಲ್ಲಿ ಯುವ ಆಟಗಾರ ಪೃಥ್ವಿ ಶಾ ವಿಕೆಟ್ ಕಳೆದುಕೊಂಡಿತು. ಟೂರ್ನಿಯಲ್ಲಿ ಮೊದಲ ಬಾರಿಗೆ ಆಡುವ ಬಳಗದಲ್ಲಿ ಕಾಣಿಸಿಕೊಂಡ ಅಜಿಂಕ್ಯ ರಹಾನೆ 15 ರನ್‌ಗಳಿಗೆ ಆಟ ಮುಗಿಸಿದರು.

ಆದರೆ ಆರಂಭಿಕ ಆಟಗಾರ ಶಿಖರ್ ಧವನ್ ಇಂದಿನ ಪಂದಗ್ಯದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದರು. 52 ಎಸೆತ ಎದುರಿಸಿದ ಧವನ್ 69ರನ್‌ಗಳ ಕೊಡುಗೆಯನ್ನು ನೀಡಿ ಅಜೇಯವಾಗುಳಿದರು. ಡೆಲ್ಲಿ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೂಡ ಉತ್ತಮ ಸಾಥ್ ನೀಡಿದರು. ಐಯ್ಯರ್ 33 ಎಸೆತಗಳಲ್ಲಿ 42 ರನ್ ಬಾರಿಸಿದ್ದಾರೆ. ಅಂತಿಮ ಹಂತದಲ್ಲಿ ಮಾರ್ಕಸ್ ಸ್ಟೋಯ್ನಿಸ್ ಹಾಗೂ ಅಲೆಕ್ಸ್ ಕ್ಯಾರಿ ರನ್ ವೇಗ ಹೆಚ್ಚಿಸಿ ನಿಗದಿ 20 ಓವರ್‌ಗಳಲ್ಲಿ 162 ರನ್‌ಗಳನ್ನು ಗಳಿಸಲು ಕಾರಣರಾದರು.

ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಬೌಲಿಂಗ್‌ನಲ್ಲಿ ಕೃಣಾಲ್ ಪಾಂಡ್ಯ ಮಿಂಚಿದ್ದಾರೆ. ನಾಲ್ಕು ಓವರ್‌ಗಳಲ್ಲಿ ಕೇವಲ 26 ರನ್ ನೀಡಿದ ಕೃಣಾಲ್ 2 ವಿಕೆಟ್ ಕಿತ್ತಿದ್ದಾರೆ. ಬೂಮ್ರಾ, ಚಾಹರ್ ಕೂಡ ಎದುರಾಳಿಯ ರನ್‌ವೇಗಕ್ಕೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು.

Story first published: Sunday, October 11, 2020, 21:26 [IST]
Other articles published on Oct 11, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+