Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಾಜಿ ನಾಯಕ ಹುಸೇನ್ ಆಯ್ಕೆಯ ಐಪಿಎಲ್ 2020 ತಂಡ ಹೀಗಿದೆ

IPL 2020: Nasser Hussains excludes Rohit and Kohli from his Team of the Season

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರನ್ನು ಆಯ್ಕೆ ಮಾಡಿ ಮಾಜಿ ಕ್ರಿಕೆಟರ್ಸ್, ಕಾಮೆಂಟೆಟರ್ಸ್ ಐಪಿಎಲ್ 2020ರ ಶ್ರೇಷ್ಠ ತಂಡವನ್ನು ಹೆಸರಿಸುತ್ತಿದ್ದಾರೆ.

ಕೊವಿಡ್ 19 ಸಂಕಷ್ಟದ ನಡುವೆ ಯುಎಇಯಲ್ಲಿ ಐಪಿಎಲ್ 13ನೇ ಆವೃತ್ತಿಯನ್ನು ಆಯೋಜಿಸಿ ಬಿಸಿಸಿಐ ಗೆದ್ದಿದೆ. ಅಂತಿಮ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಮುಂಬೈ ಇಂಡಿಯನ್ಸ್ ಮತ್ತೆ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

ಈ ನಡುವೆ ಐದನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದ ನಾಯಕ ರೋಹಿತ್ ಶರ್ಮ ಹಾಗೂ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಅವರನ್ನು ನಾಸರ್ ಹುಸೇನ್ ಅವರು ತಮ್ಮ ತಂಡಕ್ಕೆ ಆಯ್ಕೆ ಮಾಡಿಲ್ಲ.

ಬಹುತೇಕ ಎಲ್ಲರ ಆಯ್ಕೆಯಂತೆ ಕಿಂಗ್ಸ್ ಎಲೆವನ್ ಪಂಜಾಬ್ ತಂಡ ನಾಯಕ ಕೆಎಲ್ ರಾಹುಲ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ಓಪನರ್ಸ್ ಆಗಿ ಹುಸೇನ್ ಆಯ್ಕೆ ಮಾಡಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಮುಂಬೈನ ಸೂರ್ಯಕುಮಾರ್ ಯಾದವ್ ಆರಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಎಬಿ ಡಿವಿಲಿಯರ್ಸ್ ಆಯ್ಕೆ ಮಾಡಿದ್ದಾರೆ.

ಆದರೆ, ಆಲ್ ರೌಂಡರ್ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಿದ್ದಾರೆ. ಈ ಐಪಿಎಲ್ ನಲ್ಲಿ ಹಾರ್ದಿಕ್ ಬೌಲಿಂಗ್ ಮಾಡದಿದ್ದರೂ 180 ಸ್ಟ್ರೈಕ್ ರೇಟ್ ನಂತೆ 281 ರನ್ ಗಳಿಸಿದ್ದಾರೆ.

ನಾಸರ್ ಹುಸೇನ್ ಆಯ್ಕೆಯ ತಂಡ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶಾನ್, ಎಬಿ ಡಿವಿಲಿಯರ್ಸ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಜೋಫ್ರಾ ಆರ್ಚರ್, ರಶೀದ್ ಖಾನ್, ಕಾಗಿಸೋ ರಬಾಡ, ಜಸ್ ಪ್ರೀತ್ ಬೂಮ್ರಾ, ಟ್ರೆಂಟ್ ಬೌಲ್ಟ್.

Story first published: Friday, November 13, 2020, 0:23 [IST]
Other articles published on Nov 13, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+