
ಐಪಿಎಲ್‌ನಲ್ಲಿ ಇಂದಿನಿಂದ ಪ್ಲೇಆಫ್ ಪಂದ್ಯಗಳು ಆರಂಭವಾಗಿದೆ. ಮೊದಲ ಕ್ವಾಲಿಫೈಯರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮೂಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಪೈನಲ್ ಪ್ರವೇಶವನ್ನು ಗಿಟ್ಟಿಸಿಕೊಳ್ಳಲಿದೆ. ಹೀಗಾಗಿ ಗೆಲ್ಲಲು ಎರಡು ತಂಡಗಳು ಕೂಡ ಸಾಕಷ್ಟು ಪೈಪೋಟಿಯನ್ನು ನಡೆಸಲಿದೆ. ಸೊತ ತಂಡಕ್ಕೆ ಇನ್ನೊಂದು ಕ್ವಾಲಿಪೈಯರ್ ಮೂಲಕ ಅವಕಾಶವಿದೆಯಾದರೂ ಗೆಲ್ಲುವ ತಂಡ ಯಾವುದೇ ಆತಂಕವಿಲ್ಲದೆ ಫೈನಲ್‌ಗೆ ಟಿಕೆಟ್ ಪಡೆದುಕೊಳ್ಳಲಿದೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಳೆದ ಪಂದ್ಯದಲ್ಲಿ ವಿಶ್ರಾಂತಿಯನ್ನು ಪಡೆದಿದ್ದ ಬೂಮ್ರಾ, ಬೋಲ್ಟ್ ಹಾಗೂ ಹಾರ್ದಿಕ್ ಪಾಂಡ್ಯ ಮತ್ತೆ ಆಡುವ ಬಳಗವನ್ನು ಸೇರಿಕೊಂಡಿದ್ದಾರೆ. ಇವರಿಗಾಗಿ ಪ್ಯಾಟಿನ್ಸನ್, ಧವಳ್ ಹಾಗೂ ತಿವಾರಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯ್ನಿಸ್, ಡೇನಿಯಲ್ ಸ್ಯಾಮ್ಸ್, ಆಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಕ್ ನಾರ್ಕಿಯಾ
ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ