Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020 ಪ್ಲೇಆಫ್: ಬೆಂಗಳೂರು vs ಹೈದರಾಬಾದ್, ಟಾಸ್ ವರದಿ ಹಾಗೂ ಪ್ಲೇಯಿಂಗ್ 11

IPL 2020 Playoffs : RCB vs SRH Eliminator, Toss Report and Playing 11

ಐಪಿಎಲ್‌ ಅಂಗಳದಲ್ಲಿಂದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ. ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಗೆಲ್ಲುವ ತಂಡ ಮಾತ್ರ ಫೈನಲ್‌ಗೇರುವ ರೇಸ್‌ನಲ್ಲಿ ಉಳಿದುಕೊಳ್ಳಲಿದೆ

ಇಂದಿನ ಈ ಮಹತ್ವದ ಪಂದ್ಯದಲ್ಲಿ ಆರ್‌ಸಿಬಿ ತಂಡದಲ್ಲಿ ಬರೊಬ್ಬರಿ ನಾಲ್ಕು ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. ಕ್ರಿಸ್ ಮೋರಿಸ್ ಗಾಯಗೊಮಡಿದ್ದು ಇಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಜೊತೆಗೆ ಜೋಶ್ ಫಿಲಿಪ್ಪೆ, ಹಾಗೂ ಶಹ್ಬಾಜ್ ಅಹ್ಮದ್ ಆಡುವ ಬಳಗದಿಂದ ಹೊರಬಿದ್ದಾರೆ. ಆರೋನ್ ಫಿಂಚ್, ಆಡಂ ಜಂಪಾ, ನವ್‌ದೀಪ್ ಸೈನಿ ಹಾಗೂ ಮೊಯಿನ್ ಅಲಿ ತಂಡವನ್ನು ಕೂಡಿಕೊಂಡಿದ್ದಾರೆ.

ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಆರಂಭಿಕನಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ವೃದ್ಧಿಮಾನ್ ಸಾಹ ತಂಡದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಶ್ರೀವತ್ಸ ಗೋಸ್ವಾಮಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಡೇವಿಡ್ ವಾರ್ನರ್ (ನಾಯಕ), ಶ್ರೀವಾತ್ಸ ಗೋಸ್ವಾಮಿ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಮ್ ಗರ್ಗ್, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಶಹಬಾಜ್ ನದೀಮ್, ಸಂದೀಪ್ ಶರ್ಮಾ, ಟಿ ನಟರಾಜನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11:ಆರೋನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಮೊಯೀನ್ ಅಲಿ, ವಾಷಿಂಗ್ಟನ್ ಸುಂದರ್, ಶಿವಮ್ ದುಬೆ, ನವದೀಪ್ ಸೈನಿ, ಆಡಮ್ ಜಂಪಾ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್

Story first published: Friday, November 6, 2020, 19:20 [IST]
Other articles published on Nov 6, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+