Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಆರ್‌ಸಿಬಿ vs ಎಸ್‌ಆರ್‌ಹೆಚ್, ಎಲಿಮಿನೇಟರ್‌ನಲ್ಲಿ ಕಣಕ್ಕಿಳಿಯುವ ಸಂಭಾವ್ಯ ಪಡೆ

IPL 2020 Playoffs: RCB vs SRH Preview, Predicted Playing 11, Pitch Report, Toss Timing And Weather

ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಹಾಗೂ ಡೇವಿಟ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಇಂದು ಪ್ಲೇ ಆಫ್‌ನಲ್ಲಿ ಕಣಕ್ಕಿಳಿಯುತ್ತಿದೆ. ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವ ಈ ಎರಡು ತಂಡಗಳಿಗೆ ಫೈನಲ್ ಪ್ರವೇಶಿಸಲು ಗೆಲುವು ಅನಿವಾರ್ಯವಾಗಿದೆ. ಇಂದಿನ ಪಂದ್ಯದಲ್ಲಿ ಸೋತ ತಂಡ ಟೂರ್ನಿಯಲ್ಲಿನ ಅಭಿಯಾನವನ್ನು ಇಲ್ಲಿಗೇ ಅಂತ್ಯಗೊಳಿಸಲಿದೆ.

ಐಪಿಎಲ್ ಇತಿಹಾಸದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈವರೆಗೆ 17 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಹೈದರಾಬಾದ್ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಬೆಂಗಳೂರು 7 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ರದ್ದಾಗಿದೆ.

ಅಬುಧಾಬಿಯ ಶೇಕ್ ಝಾಯೇದ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಟಾಸ್ ಪ್ರಕ್ರಿಯೆ 7 ಗಂಡೆಗೆ ನಡೆಯಲಿದೆ. ಪಂದ್ಯ ನಡೆಯುವ ವೇಳೆಗೆ ಅಬುಧಾಬಿಯಲ್ಲಿ 28-32 ಡಿಗ್ರಿ ಸೆಲ್ಲಿಯಸ್‌ವರೆಗೆ ಉಷ್ಣಾಂಶವಿರುವ ಸಾಧ್ಯತೆಯಿದೆ.

ಸನ್‌ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಪ್ರಿಯಮ್ ಗಾರ್ಗ್ / ಅಭಿಷೇಕ್ ಶರ್ಮಾ, ಜೇಸನ್ ಹೋಲ್ಡರ್, ರಶೀದ್ ಖಾನ್, ಶಹಬಾಜ್ ನದೀಮ್, ಸಂದೀಪ್ ಶರ್ಮಾ, ಟಿ.ನಟರಾಜನ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಜೋಶುವಾ ಫಿಲಿಪ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಶಿವಮ್ ದುಬೆ, ಕ್ರಿಸ್ ಮೋರಿಸ್ / ಇಸುರು ಉದಾನ, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ / ಶಹಬಾಜ್ ಅಹ್ಮದ್, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್.

Story first published: Friday, November 6, 2020, 16:30 [IST]
Other articles published on Nov 6, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+