Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020, ಕ್ವಾಲಿಫೈಯರ್ 2: ಹೈದರಾಬಾದ್ vs ಡೆಲ್ಲಿ, ಟಾಸ್ ವರದಿ ಹಾಗೂ ಪ್ಲೇಯಿಂಗ್ 11

IPL 2020 playoffs: SRH vs DC Qualifier 2, Toss Report and Playing 11

ಐಪಿಎಲ್ 13ನೇ ಆವೃತ್ತಿಯಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ಇಂದು ನಡೆಯಲಿದೆ. ಇಂದಿನ ಪಂದ್ಯದಲ್ಲಿ ಹೈದರಾಬಾದ್ ಹಾಗೂ ಡೆಲ್ಲಿ ತಂಡಗಳು ಫೈನಲ್ ಪ್ರವೇಶಕ್ಕಾಗಿ ಹೋರಾಟ ನಡೆಸಲಿದೆ. ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಮುಂಬೈ ವಿರುದ್ಧ ಮಂಗಳವಾರ ನಡೆಯುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಹೋರಾಟವನ್ನು ನಡೆಸಲಿದೆ. ಸೋತ ತಂಡ ಮೂರನೇ ಸ್ಥಾನಿಯಾಗಿ ಟೂರ್ನಿಯಿಂದ ಹೊರ ಬೀಳಲಿದೆ. ಹೀಗಾಗಿ ಫೈನಲ್ ಪ್ರವೇಶಕ್ಕಾಗಿ ಜಿದ್ದಾಜಿದ್ದಿನ ಹೋರಾಟ ಏರ್ಪಡಲಿದೆ.

ಇಂದಿನ ಪಂದ್ಯಕ್ಕಾಗಿ ಡೆಲ್ಲಿ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರವೀಣ್ ದುಬೆ ಹಾಗೂ ಶಿಮ್ರಾನ್ ಹೇಟ್ಮೆಯರ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ ತಮಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಳೆದ ಪಂದ್ಯದ ತಂಡವನ್ನೇ ಉಳಿಸಿಕೊಳ್ಳಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯ್ನಿಸ್ , ಆಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಪ್ರವೀಣ್ ದುಬೆ, ಕಗಿಸೊ ರಬಾಡಾ, ಅನ್ರಿಕ್ ನಾರ್ಕಿಯಾ

ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಶ್ರೀವತ್ಸ ಗೋಸ್ವಾಮಿ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಮ್ ಗರ್ಗ್, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಶಹಬಾಜ್ ನದೀಮ್, ಸಂದೀಪ್ ಶರ್ಮಾ, ಟಿ ನಟರಾಜನ್

Story first published: Sunday, November 8, 2020, 19:19 [IST]
Other articles published on Nov 8, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+