
ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 29ರಂದು ನಡೆದ ಮಹತ್ವದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಸೋಲುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮುಂಬೈಗೆ ನೆರವಾಗಿದೆ. ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..
ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ನಿಗದಿತ 20 ಓವರ್ ಗಳಲ್ಲಿ 172/5 ರನ್ ಬೃಹತ್ ಮೊತ್ತ ಕಲೆ ಹಾಕಿತು. ಚೆನ್ನೈ ತಂಡ ಕೊನೆ ಓವರ್ ನಲ್ಲಿ ಜಡೇಜಾ ಅವರ ಸತತ 2 ಸಿಕ್ಸರ್ ನೆರವಿನಿಂದ 178/4 ರನ್ ಗಳಿಸಿ 6 ವಿಕೆಟ್ ಗಳಿಂದ ಜಯ ಗಳಿಸಿತು.
ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.
ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ
ಅಂಕಪಟ್ಟಿ ಅಕ್ಟೋಬರ್ 29ರಂತೆ: ಕೆಕೆಆರ್ ವಿರುದ್ಧ ಚೆನ್ನೈ ಜಯ ದಾಖಲಿಸಿದ ನಂತರ ಮುಂಬೈ ತಂಡವು 12 ಪಂದ್ಯಗಳಿಂದ 8 ಗೆಲುವು ದಾಖಲಿಸಿ 16 ಅಂಕ ಗಳಿಸಿ ಅಗ್ರಸ್ಥಾನಕ್ಕೇರಿದ್ದಲ್ಲದೆ, ಪ್ಲೇ ಆಫ್ ಗೆ ಅಧಿಕತವಾಗಿ ಪ್ರವೇಶ ಪಡೆದುಕೊಂಡಿದೆ. ಮುಂಬೈ +1.186 ಉತ್ತಮ ರನ್ ಸರಾಸರಿಯನ್ನು ಹೊಂದಿದೆ. 13 ಪಂದ್ಯಗಳ ನಂತರ ಕೆಕೆಆರ್ 12 ಅಂಕಗಳಿಸಿ 5ನೇ ಸ್ಥಾನದಲ್ಲೇ ಉಳಿದಿದೆ. 5ನೇ ಗೆಲುವು ಸಾಧಿಸಿದ ಚೆನ್ನೈ 10 ಅಂಕಗಳಿಸಿ 8ನೇ ಸ್ಥಾನದಲ್ಲೇ ಉಳಿದಿದೆ. ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ

ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 12 ಪಂದ್ಯಗಳಿಂದ (595ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 12 ಪಂದ್ಯಗಳಿಂದ (23 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.12 ಪಂದ್ಯಗಳಿಂದ 23 ಸಿಕ್ಸರ್ ಸಿಡಿಸಿ ರಾಜಸ್ಥಾನದ ಸಂಜು ಸ್ಯಾಮ್ಸನ್ ಟಾಪ್ ನಲ್ಲಿದ್ದಾರೆ.
ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ