ಐಪಿಎಲ್ ಅಂಕಪಟ್ಟಿ: ಡೆಲ್ಲಿಗೆ ಡಿಚ್ಚಿ, ಮೇಲಕ್ಕೇರಿದ ವಾರ್ನರ್ ಪಡೆ

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 27ರಂದು ನಡೆದ ಮಹತ್ವದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಭರ್ಜರಿ ಜಯ ಸಂಪಾದಿಸಿ ಅಂಕಪಟ್ಟಿಯಲ್ಲಿ ಮೇಲಕ್ಕೇರಿದೆ. ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..

ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡವು ನಿಗದಿತ 20 ಓವರ್ ಗಳಲ್ಲಿ 219/2 ರನ್ ಬೃಹತ್ ಮೊತ್ತ ಕಲೆ ಹಾಕಿತು. ಡೆಲ್ಲಿ ತಂಡ 19 ಓವರ್ ಗಳಲ್ಲಿ 131 ರನ್ ಗಳಲ್ಲಿ ಆಲೌಟ್ ಆಗಿ 88 ರನ್ ಗಳಿಂದ ಪಂದ್ಯ ಕಳೆದುಕೊಂಡಿತು.

ಡೆಲ್ಲಿ ವಿರುದ್ಧ ಅಬ್ಬರಿಸಿದ ಹೈದರಾಬಾದ್‌ಗೆ 88 ರನ್‌ಗಳ ಗೆಲುವು

ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.

ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ

ಅಂಕಪಟ್ಟಿ ಅಕ್ಟೋಬರ್ 27ರಂತೆ: ಡೆಲ್ಲಿ ವಿರುದ್ಧ ಹೈದರಾಬಾದ್ ಜಯ ದಾಖಲಿಸಿದ ನಂತರ ಹೈದರಾಬಾದ್ ತಂಡವು 12 ಪಂದ್ಯಗಳಿಂದ 5 ಗೆಲುವು ದಾಖಲಿಸಿ 10 ಅಂಕ ಗಳಿಸಿ 6ನೇ ಸ್ಥಾನಕ್ಕೇರಿದೆ(+0.396 ರನ್ ಸರಾಸರಿ). ಈ ಪಂದ್ಯಕ್ಕೂ ಮುನ್ನ 7ನೇ ಸ್ಥಾನದಲ್ಲಿತ್ತು. 6ನೇ ಸ್ಥಾನದಲ್ಲಿದ್ದ ರಾಜಸ್ಥಾನ 10 ಅಂಕ ಗಳಿಸಿದರೂ ಉತ್ತಮ ರನ್ ಸರಾಸರಿ(-0.505 ರನ್ ಸರಾಸರಿ)ಹೊಂದಿರದ ಕಾರಣ 7ನೇ ಸ್ಥಾನಕ್ಕೆ ಕುಸಿದಿದೆ. ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ

ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 12 ಪಂದ್ಯಗಳಿಂದ (595ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 12 ಪಂದ್ಯಗಳಿಂದ (23 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ

For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Tuesday, October 27, 2020, 23:10 [IST]
Other articles published on Oct 27, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X