ಐಪಿಎಲ್ ಅಂಕಪಟ್ಟಿ: ಸತತ 5ನೇ ಜಯ, 4ನೇ ಸ್ಥಾನಕ್ಕೇರಿದ ರಾಹುಲ್ ಪಡೆ

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 26ರಂದು ನಡೆದ ಮಹತ್ವದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಕಿಂಗ್ಸ್ ಎಲೆವನ್ ಪಂಜಾಬ್ ರೋಚಕ ಜಯ ಸಂಪಾದಿಸಿ ಅಂಕಪಟ್ಟಿಯಲ್ಲಿ ಮೇಲಕ್ಕೇರಿದೆ. ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..
ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ನಿಗದಿತ 20 ಓವರ್ ಗಳಲ್ಲಿ 149/9 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ರಾಹುಲ್ ಪಡೆ ಮಂದೀಪ್ ಸಿಂಗ್ ಹಾಗೂ ಕೆಎಲ್ ರಾಹುಲ್ ಅರ್ಧಶತಕ 18.5 ಓವರ್ ಗಳಲ್ಲಿ 150/2 ಗಳಿಸಿ 8ವಿಕೆಟ್ ಗಳಿಂದ ಅರ್ಹ ಜಯ ದಾಖಲಿಸಿತು.
ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.
ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ
ಅಂಕಪಟ್ಟಿ ಅಕ್ಟೋಬರ್ 26ರಂತೆ: ಕೋಲ್ಕತ್ತಾ ವಿರುದ್ಧ ಪಂಜಾಬ್ ಜಯ ದಾಖಲಿಸಿದ ನಂತರ ಪಂಜಾಬ್ ತಂಡವು 12 ಪಂದ್ಯಗಳಿಂದ 6 ಗೆಲುವು ದಾಖಲಿಸಿ 12 ಅಂಕ ಗಳಿಸಿ 4ನೇ ಸ್ಥಾನಕ್ಕೇರಿದೆ(-0.049 ರನ್ ಸರಾಸರಿ). ಈ ಪಂದ್ಯಕ್ಕೂ ಮುನ್ನ 5ನೇ ಸ್ಥಾನದಲ್ಲಿತ್ತು. 4ನೇ ಸ್ಥಾನದಲ್ಲಿದ್ದ ಕೆಕೆಆರ್ ಈ ಪಂದ್ಯದಲ್ಲಿ ಸೋತು 12 ಅಂಕ ಗಳಿಸಿದರೂ ಉತ್ತಮ ರನ್ ಸರಾಸರಿ(-0.479 ರನ್ ಸರಾಸರಿ)ಹೊಂದಿರದ ಕಾರಣ 5ನೇ ಸ್ಥಾನಕ್ಕೆ ಕುಸಿದಿದೆ. ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ

ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 12 ಪಂದ್ಯಗಳಿಂದ (595ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 11 ಪಂದ್ಯಗಳಿಂದ (23 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications