ಐಪಿಎಲ್ ಅಂಕಪಟ್ಟಿ: ಸತತ 4ನೇ ಜಯ, 5ನೇ ಸ್ಥಾನಕ್ಕೇರಿದ ರಾಹುಲ್ ಪಡೆ

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 24 ರಂದು ನಡೆದ ಮಹತ್ವದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕಿಂಗ್ಸ್ ಎಲೆವನ್ ಪಂಜಾಬ್ ರೋಚಕ ಜಯ ಸಂಪಾದಿಸಿ ಅಂಕಪಟ್ಟಿಯಲ್ಲಿ ಮೇಲಕ್ಕೇರಿದೆ. ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..
ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡವು ನಿಗದಿತ 20 ಓವರ್ ಗಳಲ್ಲಿ 126/7 ಗಳಿಸಲು ಮಾತ್ರ ಸಾಧ್ಯವಾಯಿತು. ವಾರ್ನರ್ ಪಡೆ ಉತ್ತಮ ಆರಂಭ ಪಡೆದರೂ 19.5 ಓವರ್ ಗಳಲ್ಲಿ 114 ಮಾತ್ರ ಗಳಿಸಿ ಆಲೌಟ್ ಆಗಿ ಸೋಲು ಕಂಡಿತು
ಅಂಕಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿ ಬದಲಾವಣೆಯಾಗಿಲ್ಲ, 8 ಸ್ಥಾನದಲ್ಲಿದ್ದ ಧೋನಿ ಪಡೆಯು ಸೋಲಿನೊಂದಿಗೆ ಅಲ್ಲೇ ಉಳಿದಿದೆ.
ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.

ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ
ಅಂಕಪಟ್ಟಿ ಅಕ್ಟೋಬರ್ 24ರಂತೆ: ಹೈದರಾಬಾದ್ ವಿರುದ್ಧ ಪಂಜಾಬ್ ಜಯ ದಾಖಲಿಸಿದ ನಂತರ ಪಂಜಾಬ್ ತಂಡವು 11 ಪಂದ್ಯಗಳಿಂದ 5 ಗೆಲುವು ದಾಖಲಿಸಿ 10 ಅಂಕ ಗಳಿಸಿ 5ನೇ ಸ್ಥಾನಕ್ಕೇರಿದೆ. ಈ ಪಂದ್ಯಕ್ಕೂ ಮುನ್ನ 6ನೇ ಸ್ಥಾನದಲ್ಲಿತ್ತು. 5ನೇ ಸ್ಥಾನದಲ್ಲಿದ್ದ ಹೈದರಾಬಾದ್ ಈ ಪಂದ್ಯದಲ್ಲಿ ಸೋತು 6ನೇ ಸ್ಥಾನಕ್ಕೆ ಕುಸಿದಿದೆ. ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ
ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 11 ಪಂದ್ಯಗಳಿಂದ (567ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 11 ಪಂದ್ಯಗಳಿಂದ (23 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications