
ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 11ರಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ನಂತರ ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..
ಅಂಕಪಟ್ಟಿಯಲ್ಲಿ ಅಗ್ರಸ್ಥಾನದಿಂದ ಕೆಳಗಿಳಿದಿದ್ದ ಚಾಂಪಿಯನ್ ತಂಡ ಮುಂಬೈ ಇಂಡಿಯನ್ ಮತ್ತೆ ನಂ1 ಸ್ಥಾನಕ್ಕೇರಿದೆ. ಮುಂಬೈ ವಿರುದ್ಧ 5 ವಿಕೆಟ್ ಗಳ ಅಂತರದ ಸೋಲು ಕಂಡ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನಕ್ಕೆ ಕುಸಿದಿದೆ.
ಕೊಹ್ಲಿ ಪಡೆ ನಾಲ್ಕನೇ ಸ್ಥಾನದಲ್ಲಿದೆ. ಚೆನ್ನೈ ತಂಡ ಸೋಲು ಕಂಡು 6ನೇ ಸ್ಥಾನಕ್ಕೆ ಕುಸಿದಿದೆ. ಕೆಕೆಆರ್ ಮೂರನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ ಐದನೇ ಸ್ಥಾನದಲ್ಲಿದೆ. ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.

ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ
ಅಂಕಪಟ್ಟಿ ಅಕ್ಟೋಬರ್ 11ರಂತೆ: ಡೆಲ್ಲಿ ವಿರುದ್ಧ ಮುಂಬೈ ಗೆಲುವು ಸಾಧಿಸಿದ ಬಳಿಕ: ಮುಂಬೈ 7 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿದ್ದು, 10 ಅಂಕ ರನ್ ಸರಾಸರಿ (+ 1.327) ಹೊಂದಿದೆ. 7 ಪಂದ್ಯಗಳಿಂದ 5 ಗೆಲುವು ಸಾಧಿಸಿರುವ ಡೆಲ್ಲಿ 10 ಅಂಕ ಗಳಿಸಿದ್ದು, ರನ್ ಸರಾಸರಿ (+1.038)ಯೊಂದಿಗೆ 2ನೇ ಸ್ಥಾನದಲ್ಲಿದೆ. ಮೂರನೇ ಸ್ಥಾನಕ್ಕೇರಿರುವ ಕೆಕೆಆರ್ 8 ಅಂಕ (+0.017 ರನ್ ಸರಾಸರಿ) ಗಳಿಸಿದ್ದರೆ, ನಾಲ್ಕನೇ ಸ್ಥಾನಕ್ಕೆ ಬಂದಿರುವ ಆರ್ ಸಿಬಿ ಕೂಡಾ 8 ಅಂಕ ಪಡೆದಿದ್ದು, ರನ್ ಸರಾಸರಿ (-0.820) ಕೆಕೆಆರ್ ಗಿಂತ ಕಡಿಮೆ ಇದೆ. ಹೈದರಾಬಾದ್ (+0.153) ರನ್ ಸರಾಸರಿ ಚೆನ್ನಾಗಿದ್ದರೂ 6 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ
ಸೋಮವಾರ (ಅಕ್ಟೋಬರ್ 12)ದಂದು ಮೂರನೇ ಸ್ಥಾನದಲ್ಲಿರುವ ಕೆಕೆಆರ್ ಹಾಗೂ 4ನೇ ಸ್ಥಾನದಲ್ಲಿರುವ ಆರ್ ಸಿಬಿ ನಡುವೆ ಪಂದ್ಯ ನಡೆಯಲಿದೆ.
ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 7 ಪಂದ್ಯಗಳಿಂದ (387ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 7 ಪಂದ್ಯಗಳಿಂದ (17 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ