ಐಪಿಎಲ್ ಅಂಕಪಟ್ಟಿ: RCB ಸೋಲಿಸಿ, ಟಾಪ್ ಸ್ಥಾನ, ಪ್ಲೇಆಫ್ ಸೇರಿದ ಮುಂಬೈ

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 28ರಂದು ನಡೆದ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಂಪಾದಿಸಿ ಅಂಕಪಟ್ಟಿಯಲ್ಲಿ ಮೇಲಕ್ಕೇರಿದೆ. ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..
ಮೊದಲು ಬ್ಯಾಟ್ ಮಾಡಿದ ಬೆಂಗಳೂರು ತಂಡವು ನಿಗದಿತ 20 ಓವರ್ ಗಳಲ್ಲಿ 164/6ರನ್ ಬೃಹತ್ ಮೊತ್ತ ಕಲೆ ಹಾಕಿತು. ಮುಂಬೈ ತಂಡ 19.1 ಓವರ್ ಗಳಲ್ಲಿ 166/5 ರನ್ ಗಳಿಸಿ 5 ವಿಕೆಟ್ ಗಳಿಂದ ಜಯ ಗಳಿಸಿತು.
ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.
ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ
ಅಂಕಪಟ್ಟಿ ಅಕ್ಟೋಬರ್ 28ರಂತೆ: ಬೆಂಗಳೂರು ವಿರುದ್ಧ ಮುಂಬೈ ಜಯ ದಾಖಲಿಸಿದ ನಂತರ ಮುಂಬೈ ತಂಡವು 12 ಪಂದ್ಯಗಳಿಂದ 8 ಗೆಲುವು ದಾಖಲಿಸಿ 16 ಅಂಕ ಗಳಿಸಿ ಅಗ್ರಸ್ಥಾನಕ್ಕೇರಿದ್ದಲ್ಲದೆ, ಪ್ಲೇ ಆಫ್ ಗೆ ಅರ್ಹತೆ ಗಳಿಸಿದೆ. ಮುಂಬೈ +1.186 ಉತ್ತಮ ರನ್ ಸರಾಸರಿಯನ್ನು ಹೊಂದಿದೆ. ಈ ಪಂದ್ಯಕ್ಕೂ ಮುನ್ನ 2ನೇ ಸ್ಥಾನದಲ್ಲಿದ್ದ ಬೆಂಗಳೂರು 12 ಪಂದ್ಯಗಳಿಂದ 14 ಅಂಕ ಗಳಿಸಿದೆ. ರನ್ ಸರಾಸರಿ(+0.048) ಇನ್ನಷ್ಟು ಉತ್ತಮಗೊಳ್ಳಬೇಕಿದೆ. ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ

ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 12 ಪಂದ್ಯಗಳಿಂದ (595ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 12 ಪಂದ್ಯಗಳಿಂದ (23 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications