For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಸೂಪರ್ ಗೆಲುವಿನ ನಂತರ 6ನೇ ಸ್ಥಾನಕ್ಕೇರಿದ ಪಂಜಾಬ್

IPL 2020 Points Table: Highest Run Scorers, Wicket taker after Oct 19 Super Over matches

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 18/19 ಮಧ್ಯರಾತ್ರಿ ಇತಿಹಾಸ ನಿರ್ಮಿಸಿದ ಪಂದ್ಯಾವಳಿಗೆ ಸಾಕ್ಷಿಯಾಯಿತು. ಒಂದೇ ಪಂದ್ಯದಲ್ಲಿ ಎರಡು ಸೂಪರ್ ಓವರ್, ಒಂದೇ ದಿನ ಮೂರು ಸೂಪರ್ ಓವರ್ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಮೂರು ಸೂಪರ್ ಓವರ್ ಪಂದ್ಯಗಳ ನಂತರ ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಿಂದ ಕೆಳಗಿಳಿದಿದ್ದ ಚಾಂಪಿಯನ್ ತಂಡ ಮುಂಬೈ ಇಂಡಿಯನ್ ನಂ 2 ಸ್ಥಾನದಲ್ಲೇ ಉಳಿದುಕೊಂಡಿದ್ದರೆ, ಮುಂಬೈ ವಿರುದ್ಧ ಎರಡು ಸೂಪರ್ ಓವರ್ ಆಗಿ ಗೆಲುವು ದಾಖಲಿಸಿದ ಕಿಂಗ್ಸ್ ಎಲೆವನ್ ಪಂಜಾಬ್ ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಿಂದ 6ನೇ ಸ್ಥಾನಕ್ಕೆ ಜಿಗಿದಿದೆ.

ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.

ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ

ಅಂಕಪಟ್ಟಿ ಅಕ್ಟೋಬರ್ 19ರಂತೆ: ಮುಂಬೈ ವಿರುದ್ಧ ಎರಡನೇ ಸೂಪರ್ ಓವರ್ ನಲ್ಲಿ ಜಯ ದಾಖಲಿಸಿದ ಕೆಎಲ್ ರಾಹುಲ್ ಪಡೆ 9 ಪಂದ್ಯಗಳ ನಂತರ 3 ಜಯ, 6 ಸೋಲಿನೊಂದಿಗೆ 6 ಅಂಕ ಗಳಿಸಿ 6ನೇ ಸ್ಥಾನಕ್ಕೇರಿದೆ. ಚೆನ್ನೈ, ರಾಜಸ್ಥಾನ ನಂತರದ ಸ್ಥಾನದಲ್ಲಿದ್ದು ತಲಾ 6 ಅಂಕ ಪಡೆದಿವೆ.

IPL 2020 Points Table: Highest Run Scorers, Wicket taker after Oct 19 Super Over matches

ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 9 ಪಂದ್ಯಗಳಿಂದ (525ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 9 ಪಂದ್ಯಗಳಿಂದ (19 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆರ್ ಸಿಬಿಯ ಎಬಿ ಡಿ ವಿಲಿಯರ್ಸ್ 9 ಪಂದ್ಯಗಳಲ್ಲಿ 19 ಸಿಕ್ಸರ್ ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ.

ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ

Story first published: Monday, October 19, 2020, 10:38 [IST]
Other articles published on Oct 19, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+