ಐಪಿಎಲ್ 2020: ಚೆನ್ನೈ ಸೋಲಿಸಿ 4ನೇ ಸ್ಥಾನಕ್ಕೇರಿದ ಬೆಂಗಳೂರು

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 10ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ನಂತರ ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..
ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಚಾಂಪಿಯನ್ ತಂಡ ಮುಂಬೈ ಇಂಡಿಯನ್ ಕೆಳಗಿಳಿದಿದೆ. ಕೊಹ್ಲಿ ಪಡೆ ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೇರಿದೆ. ಚೆನ್ನೈ ತಂಡ ಸೋಲು ಕಂಡು 6ನೇ ಸ್ಥಾನಕ್ಕೆ ಕುಸಿದಿದೆ. ಕೆಕೆಆರ್ ಮೂರನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ ಐದನೇ ಸ್ಥಾನದಲ್ಲಿದೆ. ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.
ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ
ಅಂಕಪಟ್ಟಿ ಅಕ್ಟೋಬರ್ 11ರಂತೆ: ಚೆನ್ನೈ ವಿರುದ್ಧ ಬೆಂಗಳೂರು ಗೆಲುವು ಸಾಧಿಸಿದ ಬಳಿಕ: ಡೆಲ್ಲಿ 6 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿದ್ದು, 10 ಅಂಕ ರನ್ ಸರಾಸರಿ (+ 1.267) ಹೊಂದಿದೆ. 6 ಪಂದ್ಯಗಳಿಂದ 4 ಗೆಲುವು ಸಾಧಿಸಿರುವ ಮುಂಬೈ 8 ಅಂಕ ಗಳಿಸಿದ್ದು, ರನ್ ಸರಾಸರಿ (+1.488)ಯೊಂದಿಗೆ 2ನೇ ಸ್ಥಾನದಲ್ಲಿದೆ.
ಭಾನುವಾರ (ಅಕ್ಟೋಬರ್ 11)ದಂದು ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾ ರಾಯಲ್ಸ್ ಪಂದ್ಯವಿದೆ. ಹೈದರಾಬಾದ್ ಗೆಲುವು ಸಾಧಿಸಿದರೆ 3ನೇ ಸ್ಥಾನಕ್ಕೇರಬಹುದು. ಇನ್ನೊಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವ ದೆಹಲಿ ಹಾಗೂ ಮುಂಬೈ ಸೆಣಸಲಿವೆ.

ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 7 ಪಂದ್ಯಗಳಿಂದ (387ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 6 ಪಂದ್ಯಗಳಿಂದ (15 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications