ಐಪಿಎಲ್ ಅಂಕಪಟ್ಟಿ: ಸೋತು ಗೆದ್ದ ಬೆಂಗಳೂರು, ಪ್ಲೇ ಆಫ್ ಹಂತಕ್ಕೆ ಅರ್ಹ

ಐಪಿಎಲ್ 2020ನಲ್ಲಿ ನವೆಂಬರ್ 02ರಂದು ನಡೆದ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಮೇಲಕ್ಕೇರಿದ್ದಲ್ಲದೆ ಪ್ಲೇ ಆಫ್ ಹಂತಕ್ಕೇರಿದೆ. ಈ ಪಂದ್ಯದಲ್ಲಿ ಸೋತರೂ ಆರ್ ಸಿಬಿಗೆ ಪ್ಲೇ ಆಫ್ ಅರ್ಹತೆ ಗಳಿಸುವ ಅವಕಾಶ ಹೆಚ್ಚಿದೆ. ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..
ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ ತಂಡವು ನಿಗದಿತ 20 ಓವರ್ ಗಳಲ್ಲಿ 152/7ರನ್ ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ 19 ಓವರ್ ಗಳಲ್ಲಿ 154/4 ರನ್ ಗಳಿಸಿ ಜಯ ದಾಖಲಿಸಿತು
ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.
ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ
ಅಂಕಪಟ್ಟಿ ನವೆಂಬರ್ 02ರಂತೆ: ಬೆಂಗಳೂರು ವಿರುದ್ಧ ಡೆಲ್ಲಿ ಜಯ ದಾಖಲಿಸಿದ ನಂತರ ಶ್ರೇಯರ್ ಅಯ್ಯರ್ ಪಡೆಯು 14 ಪಂದ್ಯಗಳಿಂದ 8 ಗೆಲುವು ದಾಖಲಿಸಿ 16 ಅಂಕ ಗಳಿಸಿ 2ನೇ ಸ್ಥಾನಕ್ಕೇರಿದ್ದು, ಇನ್ನೂ ಪ್ಲೇ ಆಫ್ ಗೆ ಅರ್ಹತೆ ಪಡೆದ ಎರಡನೇ ತಂಡವೆನಿಸಿತು. ಕೊಹ್ಲಿ ಪಡೆ ಈ ಪಂದ್ಯದಲ್ಲಿ ಸೋತ ಬಳಿಕ 14 ಪಂದ್ಯಗಳಲ್ಲಿ 7 ಗೆಲುವು ಸಾಧಿಸಿ 14 ಅಂಕಗಳಿಸಿ 3ನೇ ಸ್ಥಾನಕ್ಕೆ ಕುಸಿದಿದೆ.
ಪ್ಲೇ ಆಫ್ ಹಂತ: ಆರ್ ಸಿಬಿ ತಾಂತ್ರಿಕವಾಗಿ ಕೆಕೆಆರ್ ಗಿಂತಲೂ ಉತ್ತಮ ರನ್ ಸರಾಸರಿ ಹೊಂದಿರುವುದರಿಂದ ಅಂಕಗಳ ಆಧಾರದ ಮೇಲೆ ಪ್ಲೇ ಆಫ್ ಗೆ ಅರ್ಹತೆ ಪಡೆದುಕೊಂಡಿದೆ. ಸನ್ ರೈಸರ್ಸ್ ಕೊನೆ ಪಂದ್ಯದಲ್ಲಿ ಮುಂಬೈ ವಿರುದ್ಧ ಗೆದ್ದರೆ 14 ಅಂಕ ಗಳಿಸಿ ಕೆಕೆಆರ್ ಹಾಗೂ ಆರ್ ಸಿಬಿ ಎರಡು ತಂಡವನ್ನು ಹಿಂದಿಕ್ಕಿ ಪ್ಲೇ ಆಫ್ ಹಂತಕ್ಕೇರಬಹುದಾಗಿದೆ. ಹೈದರಾಬಾದ್ ಕೊನೆ ಪಂದ್ಯದಲ್ಲಿ ಸೋತರೆ ಕೆಕೆಆರ್ ಅರ್ಹತೆ ಗಳಿಸಲಿದೆ. ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ
ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 14 ಪಂದ್ಯಗಳಿಂದ (670ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 14 ಪಂದ್ಯಗಳಿಂದ (25 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. 14 ಪಂದ್ಯಗಳಿಂದ 26 ಸಿಕ್ಸರ್ ಸಿಡಿಸಿ ರಾಜಸ್ಥಾನದ ಸಂಜು ಸ್ಯಾಮ್ಸನ್ ಟಾಪ್ ನಲ್ಲಿದ್ದಾರೆ.
ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications