ಐಪಿಎಲ್ : ಕೆಕೆಆರ್ ಸೋಲಿಸಿ, ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ವಿರಾಟ್ ಪಡೆ

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 21 ರಂದು ನಡೆದ ಬದ್ಧವೈರಿಗಳ ಕಾಳಗ ಅಲ್ಪಮೊತ್ತ, ಹಲವು ದಾಖಲೆಗಳಿಗೆ ಸಾಕ್ಷಿಯಾಯಿತು. ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸುಲಭ ಜಯ ಸಂಪಾದಿಸಿ ಅಂಕಪಟ್ಟಿಯಲ್ಲಿ ಮೇಲಕ್ಕೇರಿದೆ. ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..
ಮೊದಲು ಬ್ಯಾಟ್ ಮಾಡಿದ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 84/8 ಸ್ಕೋರ್ ಮಾಡಲು ಮಾತ್ರ ಸಾಧ್ಯವಾಯಿತು. ವಿರಾಟ್ ಕೊಹ್ಲಿ ಪಡೆ 2 ವಿಕೆಟ್ ಕಳೆದುಕೊಂಡು ಸುಲಭವಾಗಿ ರನ್ ಚೇಸ್ ಮಾಡಿ 2 ಅಂಕ ಗಳಿಸಿತು.
ಅಂಕಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿ ಬದಲಾವಣೆಯಾಗಿದೆ. ಮಾರ್ಗನ್ ಪಡೆ ವಿರುದ್ಧ ಗೆಲುವು ದಾಖಲಿಸಿ ಕೊಹ್ಲಿ ಬಳಗವು ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.
ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.

ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ
ಅಂಕಪಟ್ಟಿ ಅಕ್ಟೋಬರ್ 21ರಂತೆ: ಕೆಕೆಆರ್ ವಿರುದ್ಧ ಬೆಂಗಳೂರು ಜಯ ದಾಖಲಿಸಿದ ನಂತರ ಬೆಂಗಳೂರು ತಂಡವು 10 ಪಂದ್ಯಗಳಿಂದ 7 ಗೆಲುವು ದಾಖಲಿಸಿ 14 ಅಂಕ ರನ್, ಸರಾಸರಿ (0.182) ಯೊಂದಿಗೆ 2ನೇಸ್ಥಾನಕ್ಕೇರಿದರೆ, 4ನೇ ಸ್ಥಾನದಲ್ಲಿದ್ದ ಕೆಕೆಆರ್ ಅದೇ ಸ್ಥಾನದಲ್ಲಿ ಉಳಿದಿದೆ. 2ನೇ ಸ್ಥಾನದಲ್ಲಿದ್ದ ಮುಂಬೈ 9 ಪಂದ್ಯಗಳಿಂದ 6 ಜಯ ದಾಖಲಿಸಿ 12 ಅಂಕಗಳಿಸಿದೆ ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ
ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 10 ಪಂದ್ಯಗಳಿಂದ (540ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 10 ಪಂದ್ಯಗಳಿಂದ (21 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆರ್ ಸಿಬಿಯ ಎಬಿ ಡಿ ವಿಲಿಯರ್ಸ್ 9 ಪಂದ್ಯಗಳಲ್ಲಿ 19 ಸಿಕ್ಸರ್ ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ.
ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications