ಐಪಿಎಲ್ 2020: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಸಂಭಾವ್ಯ ತಂಡ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟೂರ್ನಿಯ ಮೊದಲ ಸುತ್ತಿನ ಕಾದಾಟದಲ್ಲಿ ರಾಜಸ್ಥಾನ್ ರಾಯಲ್ಸ್ ಸೋಲು ಅನುಭವಿಸಿತ್ತು. ಈ ಸೋಲುಗೆ ಪ್ರತಿಕಾರ ತೀರಿಸಿಕೊಳ್ಳಲು ರಾಜಸ್ಥಾನ್ ರಾಯಕ್ಸ್ ತಂಡ ಸಜ್ಜಾಗಿದೆ. ಈ ಮೂಲಕ ಅಂಕಪಟ್ಟಿಯಲ್ಲೂ ಸ್ಥಾನವನ್ನು ಉತ್ತಮ ಪಡಿಸಿಕೊಳ್ಳುವ ಅವಕಾಶ ಸ್ಟೀವ್ ಸ್ಮಿತ್ ಪಡೆಗಿದೆ.
ಟೂರ್ನಿಯಲ್ಲಿ ಅದ್ಭುತ ಪ್ರದರ್ಶವನ್ನು ನೀಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋಲಿನ ರುಚಿಯನ್ನು ಅನುಭವಿಸಿತ್ತು. ಆದರೆ ಇಂದಿನ ಪಂದ್ಯದಲ್ಲಿ ಆರ್‌ಆರ್‌ಗೆ ಮತ್ತೊಂದು ಸೋಲಿನ ಶಾಕ್ ನೀಡಿ ಮುನ್ನಡೆ ಪಡೆಯುವ ಉತ್ಸಾಹದಲ್ಲಿ ಶ್ರೇಯಸ್ ಬಳಗ ಇದೆ. ಹೀಗಾಗಿ ಇಂದಿನ ಪಂದ್ಯದ ಗೆಲ್ಲುವ ಫೆವರೀಟ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಆಗಿದೆ.
ಮೊದಲ ಸುತ್ತಿನ ಕಾದಾಟದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಡೆಲ್ಲಿ ಉತ್ತಮ ಬ್ಯಾಟಿಂಗ್ ಅದ್ಭುತ ಪ್ರದರ್ಶನವನ್ನು ನೀಡಿ 184 ರನ್‌ಗಳಿಸಿತ್ತು. ಶಾರ್ಜಾದಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ಈ ಮೊತ್ತವನ್ನು ಮೀರಿ ನಿಲ್ಲಬಹುದು ಎಂದು ಬಹುತೇಕರು ಭಾವಿಸಿದ್ದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಅದ್ಭುತ ಬೌಲಿಂಗ್ ಪ್ರದರ್ಶನದ ಮುಂದೆ ರಾಜಸ್ಥಾನ್ 138 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲು ಅನುಭವಿಸಿತ್ತು. ಈ ಸೋಲಿಗೆ ಇಂದಿನ ಪಂದ್ಯದ ಸೇಡು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.
ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ: ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಟೀವ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ / ಮನನ್ ವೊಹ್ರಾ, ರಿಯಾನ್ ಪರಾಗ್, ರಾಹುಲ್ ತೇವಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಕಾರ್ತಿಕ್ ತ್ಯಾಗಿ
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ: ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ಮಾರ್ಕಸ್ ಸ್ಟೋಯಿನಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಆಕ್ಸರ್ ಪಟೇಲ್, ಹರ್ಷಲ್ ಪಟೇಲ್, ರವಿ ಅಶ್ವಿನ್, ಕಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications