ಐಪಿಎಲ್ 2020: ಆರ್‌ಸಿಬಿ vs ಸಿಎಸ್‌ಕೆ, ಟಾಸ್ ವರದಿ ಹಾಗೂ ಪ್ಲೇಯಿಂಗ್ XI

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದ ಇಂದು ರೋಚಕ ಪಂದ್ಯಕ್ಕೆ ವೇದಿಕೆಯಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸೋಲಿನಿಂದ ಕಂಗೆಟ್ಟಿರುವ ಧೋನಿ ನೇತೃತ್ವದ ಸಿಎಸ್‌ಕೆಗೆ ಇಂದಿನ ಪಂದ್ಯದ ಗೆಲುವು ಅತಿ ಮುಖ್ಯವಾಗಿದೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ಪಡೆಯೂ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿದ ಕಾರಣ ಮತ್ತೆ ಗೆಲುವಿನ ಲಯಕ್ಕೆ ಮರಳಲು ಇಂದಿನ ಪಂದ್ಯದ ಮೂಲಕ ಹಾತೊರೆಯುತ್ತಿದೆ.
ಆರ್‌ಸಿಬಿ ತಂಡ ಇಂದಿನ ಪಂದ್ಯದಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಂಡಿದೆ. ಅನುಭವಿ ಆಲ್‌ರೌಂಡರ್ ಕ್ರಿಸ್ ಮೋರಿಸ್ ಪದಾರ್ಪನೆಯನ್ನು ಮಾಡಿದ್ದು ಕುರ್‌ಕೀಪರತ್ ಸಿಂಗ್ ಮಾನ್ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಸಿಎಸ್‌ಕೆ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು ಕೇದಾರ್ ಜಾಧವ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಆ ಸ್ಥಾನಕ್ಕೆ ವೇಗಿ ಜಗದೀಶನ್ ಸೇರ್ಪಡೆಯಾಗಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ದೇವದತ್ ಪಡಿಕ್ಕಲ್, ಆರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಗುರ್ಕೀರತ್ ಸಿಂಗ್ ಮನ್, ಶಿವಮ್ ಡ್ಯೂಬ್, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನಾ, ನವದೀಪ್ ಸೈನಿ, ಯುಜ್ವೇಂದ್ರ ಚಹಲ್
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಶೇನ್ ವ್ಯಾಟ್ಸನ್, ಫಾಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ವಿಕೆಟ್ ಕೀಪರ್/ನಾಯಕ), ಎನ್ ಜಗದೀಶನ್, ಸ್ಯಾಮ್ ಕರ್ರನ್, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಕರ್ಣ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications