
ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಶ್ರೇಯಸ್ ಐಯ್ಯರ್ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಡುತ್ತಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ 19ನೇ ಪಂದ್ಯವಿದು. ಟಾಸ್ ಗೆದ್ದಿರುವ ಆರ್‌ಸಿಬಿ ಫೀಲ್ಡಿಂಗ್ ಆಯ್ದುಕೊಂಡಿದೆ.
ಡೆಲ್ಲಿ ಮತ್ತು ಬೆಂಗಳೂರು ಎರಡೂ ತಂಡಗಳು ಆಡಿರುವ 4 ಪಂದ್ಯಗಳಲ್ಲಿ ಮೂರು ಗೆಲುವುಗಳನ್ನು ಕಂಡಿದೆ. ಡೆಲ್ಲಿಯ ನೆಟ್ ರನ್‌ರೇಟ್ (+0.588) ಉತ್ತಮವಿರುವುದರಿಂದ ಅಂಕಪಟ್ಟಿಯಲ್ಲಿ ಡಿಸಿ ದ್ವಿತೀಯ ಸ್ಥಾನದಲ್ಲಿದೆ. ಆರ್‌ಸಿಬಿ ತೃತೀಯ ಸ್ಥಾನ (-0.954 ನೆಟ್ ರನ್‌ರೇಟ್) ಪಡೆದಿದೆ. ಇಂದಿನ ಪಂದ್ಯದ ಬಳಿಕ ಮತ್ತೆ ಅಂಕಪಟ್ಟಿಯಲ್ಲಿ ಏರಿಳಿತ ಕಾಣಲಿದೆ.
ಆರ್‌ಸಿಬಿ ಪ್ಲೇಯಿಂಗ್ XI: ದೇವದತ್ ಪಡಿಕ್ಕಲ್, ಆರನ್ ಫಿಂಚ್, ವಿರಾಟ್ ಕೊಹ್ಲಿ (ಸಿ), ಎಬಿ ಡಿವಿಲಿಯರ್ಸ್ (ವಿಕೆ), ಮೊಯೀನ್ ಅಲಿ, ಶಿವಮ್ ದೂಬೆ, ವಾಷಿಂಗ್ಟನ್ ಸುಂದರ್, ಇಸುರು ಉದಾನಾ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.
ಡಿಸಿ ಪ್ಲೇಯಿಂಗ್ XI: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ಸಿ), ರಿಷಭ್ ಪಂತ್ (ವಿಕೆ), ಶಿಮ್ರಾನ್ ಹೆಟ್ಮೈಯರ್, ಮಾರ್ಕಸ್ ಸ್ಟೋಯಿನಿಸ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಕಾಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ.