ಐಪಿಎಲ್ 2020: ಆರ್‌ಸಿಬಿ vs ಕೆಕೆಆರ್, ಟಾಸ್ ವರದಿ ಹಾಗೂ ಪ್ಲೇಯಿಂಗ್ 11

ಐಪಿಎಲ್‌ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದ ಕೊಲ್ಕತಾ ನೈಟ್ ರೈಡರ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಬುಧಾಬಿಯ ಶೇಕ್ ಜಾಯೆದ್ ಸ್ಟೇಡಿಯಮ್‌ನಲ್ಲಿ ಈ ಪಂದ್ಯ ನಡೆಯುತ್ತಿದೆ.
ಅಂಕಪಟ್ಟಿಯಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ತಂಡಗಳು ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನದಲ್ಲಿದೆ. ಈ ಹಂತದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವುದು ಎರಡೂ ತಂಡಗಳಿಗೆ ಸಾಕಷ್ಟು ಪ್ರಮುಖವಾಗಿದೆ. ಹೀಗಾಗಿ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗುತ್ತಿದೆ. ಈ ಟೂರ್ನಿಯಲ್ಲಿ ಮೊದಲ ಬಾರಿಗೆ ಆರ್‌ಸಿಬಿ ಹಾಗೂ ಕೆಕೆಆರ್ ಮುಖಾಮುಖಿಯಾಗಿದ್ದ ವೇಳೆ ಆರ್‌ಸಿಬಿ ಭಾರೀ ಅಂತರದ ಗೆಲುವನ್ನು ಸಾಧಿಸಿತ್ತು.
ಇಂದಿನ ಪಂದ್ಯಕ್ಕಾಗಿ ಆರ್‌ಸಿಬಿ ತಂಡ ಒಮದು ಬದಲಾವಣೆಯ್ನು ಮಾಡಿಕೊಂಡಿದೆ. ಶಹ್‌ಬಾಜ್ ತಂಡದಿಂದ ಹೊರಬಿದ್ದಿದ್ದು ಮೊಹಮ್ಮದ್ ಸಿರಾಜ್ ತಂಡದಲ್ಲಿ ಮತ್ತೊಮ್ಮೆ ಅವಕಾಶವನ್ನು ಪಡೆದುಕೊಂಡಿದ್ದಾರೆ. ಕೆಕೆಆರ್‌ನಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದ್ದು ಟಾಮ್ ಬಾಂಟನ್ ಹಾಗೂ ಪ್ರಸಿದ್ಧ ಕೃಷ್ಣ ಸ್ಥಾನ ಪಡೆದುಕೊಂಡಿದ್ದರೆ ಮಾವಿ ಹಾಗೂ ಆಂಡ್ರೆ ರಸ್ಸೆಲ್ ತಂಡದಿಂದ ಹೊರಬಿದ್ದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ದೇವದತ್ ಪಡಿಕ್ಕಲ್, ಆರೋನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಗುರ್ಕೀರತ್ ಸಿಂಗ್ ಮನ್, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ಮೊಹಮ್ಮದ್ ಸಿರಾಜ್, ಇಸುರು ಉದಾನಾ, ನವದೀಪ್ ಸೈನಿ, ಯುಜ್ವೇಂದ್ರ ಚಹಲ್
ಕೋಲ್ಕತಾ ನೈಟ್ ರೈಡರ್ಸ್ ಆಡುವ ಬಳಗ: ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಟಾಮ್ ಬಾಂಟನ್, ಪ್ಯಾಟ್ ಕಮ್ಮಿನ್ಸ್, ಲೂಕಿ ಫರ್ಗುಸನ್, ಕುಲದೀಪ್ ಯಾದವ್, ಪ್ರಸಾದ್ ಕೃಷ್ಣ, ವರುಣ್ ಚಕ್ರವರ್ತಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications