IPL 2020: ಪಂಜಾಬ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಬ್ಯಾಟಿಂಗ್ ಆಯ್ಕೆ

ಐಪಿಎಲ್ 13ನೇ ಆವೃತ್ತಿಯ 31ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.
ಪ್ರಸಕ್ತ ಸೀಸನ್‌ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿರುವ ಆರ್‌ಸಿಬಿ ತಂಡ ಯಾವುದೇ ಬದಲಾವಣೆ ಇಲ್ಲದೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸುತ್ತಿದೆ. ಮತ್ತೊಂದೆಡೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಮೂರು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಯೂನಿವರ್ಸಲ್ ಬಾಸ್ ಕ್ರಿಸ್‌ಗೇಲ್ ಕಣಕ್ಕಿಳಿಯುತ್ತಿದ್ದು, ಆಲ್‌ರೌಂಡರ್ ದೀಪಕ್ ಹೂಡ, ಮುರುಗನ್ ಅಶ್ವಿನ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.
ಆರ್‌ಸಿಬಿ ಪ್ಲೇಯಿಂಗ್ 11:
ಆ್ಯರೋನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಎಬಿ ಡಿ ವಿಲಿಯರ್ಸ್, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಕ್ರಿಸ್ ಮೊರಿಸ್, ಇಸುರು ಉದಾನ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜವೇಂದ್ರ ಚಹಾಲ್
ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇಯಿಂಗ್ 11:
ಕೆ.ಎಲ್ ರಾಹುಲ್, ಕ್ರಿಸ್‌ಗೇಲ್, ಮಯಾಂಕ್ ಅಗರ್ವಾಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್‌ವೆಲ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ, ರವಿ ಬಿಷ್ನೋಯಿ, ಅರ್ಷ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications