Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಬೆಂಗಳೂರು vs ಪಂಜಾಬ್, ಟಾಸ್ ವರದಿ, ಅಂತಿಮ ತಂಡಗಳು

IPL 2020: RCB vs KXIP Match 6, Toss Report and Playing 11

ದುಬೈ: ದುಬೈ ಇಂಟರ್‌ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ಇಂಡಿಯನ್ ಪ್ರೀಮಿಯರ್ ಲೀಗ್ 6ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಸೆಣಸಾಡುತ್ತಿವೆ. ಆರ್‌ಸಿಬಿ ಕರ್ನಾಟಕದ ತಂಡವಾದರೆ ಕೆXIಪಿ ಹೆಚ್ಚು ಕನ್ನಡಿಗರಿರುವ ತಂಡ. ಹೀಗಾಗಿ ಹಿಂದಿನ ಪಂದ್ಯ ಹೆಚ್ಚು ಕುತೂಹಲ ಮೂಡಿಸಿದೆ.

ಟಾಸ್ ಗೆದ್ದಿರುವ ಆರ್‌ಸಿಬಿ ಬೌಲಿಂಗ್ ಆಯ್ದುಕೊಂಡಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಸನ್‌ ರೈಸರ್ಸ್ ಹೈದರಾಬಾದ್ ವಿರುದ್ಧ ಜಯ ಕಂಡಿತ್ತು. ಇತ್ತ ಪಂಜಾಬ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂಪರ್‌ ಓವರ್‌ನಲ್ಲಿ ಸೋತಿತ್ತು. ಕಳೆದ ಪಂದ್ಯದಲ್ಲಿ ಕ್ರಿಸ್ ಗೇಲ್ ಆಡಿರಲಿಲ್ಲ. ಆದರೆ ಈ ಬಾರಿ ಗೇಲ್ ಕಣಕ್ಕಿಳಿಯುತ್ತಿದ್ದಾರೆ.

ಆರ್‌ಸಿಬಿ ಪ್ಲೇಯಿಂಗ್ XI: ದೇವದತ್ ಪಡಿಕ್ಕಲ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ (ಸಿ), ಎಬಿ ಡಿ ವಿಲಿಯರ್ಸ್, ಶಿವಮ್ ದೂಬೆ, ಜೋಶ್ ಫಿಲಿಪ್ (ವಿಕೆ), ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಉಮೇಶ್ ಯಾದವ್, ಡೇಲ್ ಸ್ಟೇನ್, ಯುಜುವೇಂದ್ರ ಚಾಹಲ್.

ಕೆXIಪಿ ಪ್ಲೇಯಿಂಗ್ XI: ಲೋಕೇಶ್ ರಾಹುಲ್ (ಸಿ/ವಿಕೆ), ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ಸರ್ಫರಾಜ್ ಖಾನ್, ಜೇಮ್ಸ್ ನೀಶಮ್, ಮೊಹಮ್ಮದ್ ಶಮಿ, ಮುರುಗನ್ ಅಶ್ವಿನ್, ಶೆಲ್ಡನ್ ಕಾಟ್ರೆಲ್, ರವಿ ಬಿಷ್ಣೋಯ್.

Story first published: Thursday, September 24, 2020, 19:11 [IST]
Other articles published on Sep 24, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+