ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ರಾಯಲ್ ಚಾಲೆಂಜರ್ಸ್‌ಗೆ ಇಂದು ಮುಂಬೈ ಇಂಡಿಯನ್ಸ್ ಸವಾಲು

Ipl 2020: Rcb Vs Mi Match 10, Predicted Playing 11, Pitch Report, Toss Timing And Dubai Weather Forecast

ಐಪಿಎಲ್‌ನಲ್ಲಿ ಇಂದು ಮತ್ತೊಂದು ಬೃಹತ್ ಕಾದಾಟ ನಡೆಯಲಿದೆ. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಹಾಗೂ ವಿರಾಟ್ ಕೊಹ್ಲಿ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದೆ. ದಿಗ್ಗಜ ಕ್ರಿಕೆಟಿಗರಿಬ್ಬರ ಕಾದಾಟದಲ್ಲಿ ಯಾರಿಗೆ ಗೆಲುವು ಎಂಬುದು ಕುತೂಹಲಕಾರಿಯಾಗಿದೆ.

ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡೂ ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಎರಡು ಪಂದ್ಯಗಳನ್ನು ಆಡಿದೆ. ಇದರಲ್ಲಿ ತಲಾ ಒಂದು ಪಂದ್ಯದಲ್ಲಿ ಗೆಲುವು ಹಾಗೂ ಸೋಲಿನ ರುಚಿಯನ್ನು ಎರಡೂ ತಂಡಗಳು ಅನುಭವಿಸಿದೆ. ಹೀಗಾಗಿ ಟೂರ್ನಿಯಲ್ಲಿ ಮೇಲುಗೈ ಸಾಧಿಸಲು ಎರಡು ತಂಡಗಳಿಗೂ ಇದೊಂದು ಅವಕಾಶವಾಗಿದ್ದು ಯಾರ ಕೈ ಮೇಲಾಗಲಿದೆ ಎಂದು ಕಾದುನೋಡಬೇಕಿದೆ.

ಐಪಿಎಲ್ 2020: ಬೃಹತ್ ಗುರಿಯನ್ನು ರೋಚಕವಾಗಿ ಬೆನ್ನತ್ತಿ ಗೆದ್ದ ರಾಜಸ್ಥಾನ್ ರಾಯಲ್ಸ್ಐಪಿಎಲ್ 2020: ಬೃಹತ್ ಗುರಿಯನ್ನು ರೋಚಕವಾಗಿ ಬೆನ್ನತ್ತಿ ಗೆದ್ದ ರಾಜಸ್ಥಾನ್ ರಾಯಲ್ಸ್

ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಜಯಗಳಿಸಿದ ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ತೀರಾ ಕಡಿಮೆಯಿದೆ. ಆದರೆ ಆರ್‌ಸಿಬಿ ತಂಡ ಅಂತಿಮ ಪಂದ್ಯದಲ್ಲಿ ಕಿಂಗ್ಸ್ ಇಲವೆನ್ ಪಂಜಾಬ್ ವಿರುದ್ಧ ಎಡವಟ್ಟುಗಳನ್ನು ಮಾಡಿ ಸೋಲು ಕಂಡ ಕಾರಣ ಕೆಲ ಬದಲಾವಣೆಗಳನ್ನು ಇಂದಿನ ಪಂದ್ಯದಲ್ಲಿ ನಿರೀಕ್ಷಿಸಲಾಗುತ್ತಿದೆ.

ಹವಾಮಾನ, ಪಿಚ್ ವರದಿ, ಟಾಸ್
ದುಬೈ ಹವಾಮಾನ ಎಂದಿನಂತೆಯೇ ಹಗಲು 37 ಡಿಗ್ರಿ ಸೆಲ್ಸಿಯಸ್‌ನ ಆಸುಮಾಸಿನಲ್ಲಿದ್ದು ಸಂಜೆ ಅದು 27 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಲಿದೆ. ಪಿಚ್ ಸಂಪೂರ್ಣವಾಗಿ ಬ್ಯಾಟಿಂಗ್‌ಗೆ ಪೂರಕವಾಗಿದ್ದು ಟಾಸ್ ಗೆದ್ದ ತಂಡಗಳು ಮೊದಲಿಗೆ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರೂ ಗೆಲ್ಲಲು ಸಾಧ್ಯವಾಗಿಲ್ಲ. ಹಾಗಾಗಿ ಈ ಪಂದ್ಯದಲ್ಲಿ ಆ ಟ್ರೆಂಡ್ ಬದಲಾಗಲಿದೆಯಾ ನೋಡಬೇಕಿದೆ. ಪಂದ್ಯ ಎಂದಿನಂತೆಯೇ ಸಂಜೆ 7:30ಕ್ಕೆ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಸಂಭಾವ್ಯ ತಂಡಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೇವದತ್ ಪಡಿಕ್ಕಲ್, ಆರೋನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಶಿವಮ್ ದುಬೆ, ಜೋಶ್ ಫಿಲಿಪ್ / ಮೊಯೀನ್ ಅಲಿ, ಇಸುರು ಉದಾನಾ / ಡೇಲ್ ಸ್ಟೇನ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಉಮೇಶ್ ಯಾದವ್, ಯುಜುವೇಂದ್ರ ಚಾಹಲ್

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಟ್ರೆಂಟ್ ಬೌಲ್ಟ್, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಜಸ್ಪ್ರೀತ್ ಬುಮ್ರಾ

Story first published: Monday, September 28, 2020, 15:18 [IST]
Other articles published on Sep 28, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X