ಐಪಿಎಲ್: ಆರ್‌ಸಿಬಿ vs ಎಂಐ, ಟಾಸ್ ರಿಪೋರ್ಟ್, ಅಂತಿಮ ತಂಡಗಳು

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಸೋಮವಾರ (ಸೆಪ್ಟೆಂಬರ್ 28) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಮುಂಬೈ ಬೌಲಿಂಗ್ ಆಯ್ದುಕೊಂಡಿದೆ.
ಎರಡೂ ತಂಡಗಳೂ ಎರಡೆರಡು ಪಂದ್ಯಗಳನ್ನು ಆಡಿದ್ದು ತಲಾ ಒಂದು ಗೆಲುವು ದಾಖಲಿಸಿವೆ. ಆದರೆ ಕೊಹ್ಲಿ ನಾಯಕತ್ವದ ಆರ್‌ಸಿಬಿ ಹಿಂದಿನ ಪಂದ್ಯದಲ್ಲಿ ಹೆಚ್ಚು ರನ್ ಅಂತರದಲ್ಲಿ ಸೋತಿರುವುದರಿಂದ ಈ ಬಾರಿಯ ಗೆಲುವು ತುಂಬಾ ಪ್ರಮುಖವಾಗಿದೆ. ಆರ್‌ಸಿಬಿ ತಂಡದಲ್ಲಿ ಸಣ್ಣ ಬದಲಾವಣೆಯಾಗಿದೆ.
ಆರ್‌ಸಿಬಿ ಪ್ಲೇಯಿಂಗ್ XI: ದೇವದತ್ ಪಡಿಕ್ಕಲ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ (ಸಿ), ಎಬಿ ಡಿವಿಲಿಯರ್ಸ್ (ವಿಕೆ), ಗುರ್ಕೀರತ್ ಸಿಂಗ್ ಮನ್, ಶಿವಮ್ ದೂಬೆ, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್, ಆ್ಯಮ್ ಜಂಪಾ, ಇಸುರು ಉದನಾ.
ಎಂಐ ಪ್ಲೇಯಿಂಗ್ XI: ಕ್ವಿಂಟನ್ ಡಿ ಕಾಕ್ (ವಿಕೆ), ರೋಹಿತ್ ಶರ್ಮಾ (ಸಿ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ರಾಹುಲ್ ಚಹಾರ್, ಜೇಮ್ಸ್ ಪ್ಯಾಟಿನ್ಸನ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications