ಐಪಿಎಲ್ 2020: ಸಿಎಸ್‌ಕೆಗೆ ಕೊರೊನಾ ಕಂಟಕ, ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿ?

ಕೊರೊನಾ ಆತಂಕದ ಮಧ್ಯೆ ಯುಎಇನಲ್ಲಿ ಐಪಿಎಲ್ ಆಯೋಜನೆಯಾಗುತ್ತಿದೆ. ಎಲ್ಲಾ 8 ತಂಡಗಳು ಕೂಡ ಈಗ ಯುಎಇ ತಲುಪಿದೆ. ಹಾಗಿದ್ದರು ಕೂಡ ಇನ್ನೂ ಈ ಬಾರಿಯ ಐಪಿಎಲ್‌ನ ವೇಳಾಪಟ್ಟಿ ಬಿಡುಗಡೆಯಾಗಿಲ್ಲ. ಈ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರಿಗೆ ಕೊರೊನಾ ವೈರಸ್ ಕಾಣಿಸಿಕೊಂಡಿರುವುದರಿಂದಾಗಿ ಇದು ಮತ್ತಷ್ಟು ವಿಳಂಬಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.
ಚೆನ್ನೈ ಆಟಗಾರರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿರುವ ಕಾರಣದಿಂದಾಗಿ ಆರಂಭಿಕ ಪಂದ್ಯದಲ್ಲಿ ಚೆನ್ನೈ ಕಾಣಿಸಿಕೊಳ್ಳುವುದು ಬಹುತೇಕ ಅನುಮಾನವೆನಿಸಿದೆ. ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಕಾದಾಡುವುದು ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ ಆ ಸ್ಥಾನ ಈಗ ಆರ್‌ಸಿಬಿಗೆ ಲಭ್ಯವಾಗುವ ಸಾಧ್ಯತೆಯಿದೆ.
ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಮುಂಬೈ ತಮಡದ ವಿರುದ್ಧ ಸೆಣೆಸಾಟವನ್ನು ನಡೆಸುವ ಸಾಧ್ಯತೆಯಿದೆ. ಈ ಬಗ್ಗೆ ಬಿಸಿಸಿಐ ಅಥವಾ ಆರ್‌ಸಿಬಿ ಯಾವುದೇ ಮಾತುಗಳನ್ನು ಸ್ಪಷ್ಟಪಡಿಸದಿದ್ದರೂ ಟೈಮ್ಸ್ ಆಫ್ ಇಂಡಿಯಾ ಈ ಬಗ್ಗೆ ವರದಿ ಮಾಡಿದೆ.
ಕೊರೊನಾ ವೈರಸ್ ಕಾರಣದಿಂದಾಗಿ ದುಬೈ ಹಾಗೂ ಅಬುದಾಬಿ ನಡುವೆ ಪ್ರಯಾಣ ನಿರ್ಬಂಧ ಇರುವ ಕಾರಣದಿಂದಾಗಿ ಈ ಬಾರಿಯ ವೇಳಾಪಟ್ಟಿ ಬಿಡುಗಡೆ ಸಾಕಷ್ಟು ತಡವಾಯಿತು. ಇನ್ನೇನು ಬಿಡುಗಡೆಗೆ ಸಿದ್ಧವಾಯಿತು ಎನ್ನುವಷ್ಟರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೊರೊನಾ ಆತಂಕಕ್ಕೆ ಒಳಗಾಗಿದೆ. ಹೀಗಾಗಿ ಮತ್ತೊಮ್ಮೆ ಈ ವೇಳಾಪಟ್ಟಿಯನ್ನು ಪರಿಶೀಲಿಸಲಾಗುತ್ತಿದೆ.
'ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿ ತಂಡ ಆಡುವುದು ಬಹುತೇಕ ಖಚಿತ. ಯಾಕೆಂದರೆ ಮೊದಲ ಪಂದ್ಯದಲ್ಲಿ ಸ್ಟಾರ್ ಆಟಗಾರರು ಕಣಕ್ಕಿಳಿಯುವ ಅಗತ್ಯವಿರುತ್ತದೆ. ಧೋನಿ ನಾಯಕತ್ವದ ಚೆನ್ನೈ ಆರಂಭಿಕ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲವೆಂದರೆ ವಿರಾಟ್ ಕೊಹ್ಲಿಯೇ ಆಯ್ಕೆಯಾಗಿರುತ್ತದೆ. ಹಾಗಿದ್ದರು ಸಿಎಸ್‌ಕೆ ಆರಂಭಿಕ ಪಂದ್ಯದಲ್ಲಿ ಆಡುತ್ತಿಲ್ಲ ಎಂಬುದು ಇನ್ನೂ ಖಚಿತವಾಗಿಲ್ಲ' ಎಂದು ಈ ಬೆಳವಣಿಗೆ ಬಗ್ಗೆ ಮಾಹಿತಿ ಹೊಂದಿರುವ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications